ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾನಸ ಗಂಗೋತ್ರಿಯ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ವಜ್ರ ಮಹೋತ್ಸವ ಸಮಾರಂಭದಲ್ಲಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ.
ರಾಷ್ಟ್ರಪತಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ರಾಷ್ಟ್ರಪತಿಗಳು ಅಲ್ಲಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅವರು ಮೈಸೂರಿಗೆ ಆಗಮಿಸುತ್ತಿರುವುದು ಇದು ಎರಡನೇ ಬಾರಿ. 2022 ರಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಿದ್ದರು.