HomeLatest News ಡಿ. 16 ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿ

 ಡಿ. 16 ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಡಿಸೆಂಬರ್ 16ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಸ್ವಾಮೀಜಿಗಳ 1066ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಡಿಸೆಂಬರ್ 16ರಿಂದ 21ರವರೆಗೆ ಸುತ್ತೂರು ಮಠದ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ ಜಯಂತಿ ಮಹೋತ್ಸವ ಆಯೋಜಿಸಲಾಗಿದೆ. ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ.

ಡಿಸೆಂಬರ್ 16ರಂದು ಮಧ್ಯಾಹ್ನ 2.10ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು ನಂತರ ಹೆಲಿಕಾಪ್ಟರ್ ನಲ್ಲಿ ಮಳವಳ್ಳಿಗೆ ತೆರಳಲಿದ್ದಾರೆ. ಸಂಜೆ 5:25 ಕ್ಕೆ ಮಳವಳ್ಳಿಯಿಂದ ಮೈಸೂರುಗೆ ಹಿಂತಿರುಗಿ ರಾತ್ರಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 17ರಂದು ಬೆಳಿಗ್ಗೆ 9:25ಕ್ಕೆ ಮೈಸೂರಿನಿಂದ ತಿರುಪತಿಗೆ ತೆರಳಲಿದ್ದಾರೆ. ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಕೈಗೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular