
ನಾಳೆ ಮಧ್ಯಾಹ್ನ 3.20ಕ್ಕೆ ದೆಹಲಿಯಿಂದ ಹೆಚ್ಎಎಲ್ ಏರ್ಪೋರ್ಟ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಉದ್ಘಾಟಿಸಲಿದ್ದು, 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ್ರಪತಿಗಳು ಗುರುವಾರ ಬೆಂಗಳೂರಿನಲ್ಲಿ ಸಂಸ್ಥಾಪನಾ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಅವರು ಮಹಿಳಾ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

