ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಭಾರತ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ

ನವದೆಹಲಿ: ಭಾರತ ಆರ್ಥಿಕತೆಯಲ್ಲಿ ಇಂದು ಐದನೇ ಸ್ಥಾನದಲ್ಲಿದ್ದು, ಮೂರನೇ ಸ್ಥಾನಕ್ಕೆ ಬರಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ನಾಳೆ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ದೇಶದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಹನೀಯರು ತ್ಯಾಗ ಮಾಡಿದಿದ್ದಾರೆ. ಭಾರತ ಶೀಘ್ರದಲ್ಲಿಯೇ ಆರ್ಥಿಕತೆಯಲ್ಲಿ ಮೂರನೇ ಸ್ಥಾನಕ್ಕೆ ಬರಲಿದೆ/ ಇಂದು ಭಾರತ ಆರ್ಥಿಕತೆಯಲ್ಲಿ ಐದನೇ ಸ್ಥಾನದಲ್ಲಿದೆ. ಸರ್ಕಾರ ಮಹಿಳಾ ಸಶಕ್ತೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಸಾಮಾಜಿಕ ನ್ಯಾಯವೇ ನಮ್ಮ ಮೊದಲ ಆದ್ಯತೆಯಾಗಿದೆ. ಭಾರತದಲ್ಲಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

ನಾವು ನಮ್ಮ ಕುಟುಂಬದೊಂದಿಗೆ ವಿವಿಧ ಹಬ್ಬಗಳನ್ನು ಆಚರಿಸುವಂತೆಯೇ, ನಮ್ಮ ಸಹ ನಾಗರಿಕರನ್ನು ಒಳಗೊಂಡಿರುವ ನಮ್ಮ ಕುಟುಂಬದೊಂದಿಗೆ ನಮ್ಮ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವವನ್ನು ಆಚರಿಸುತ್ತೇವೆ. ಆಗಸ್ಟ್ 15 ರಂದು, ದೇಶದ ಎಲ್ಲಾ ಭಾಗಗಳಲ್ಲಿ ಮತ್ತು ವಿದೇಶಗಳಲ್ಲಿ, ಭಾರತೀಯರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರ ಕನಸುಗಳು ಮತ್ತು ಮುಂದಿನ ವರ್ಷಗಳಲ್ಲಿ ರಾಷ್ಟ್ರವು ತನ್ನ ಸಂಪೂರ್ಣ ವೈಭವವನ್ನು ಮರಳಿ ಪಡೆಯುವ ಆಕಾಂಕ್ಷೆಗಳನ್ನು ಬಂಧಿಸುವ ಸರಪಳಿಯ ಭಾಗವಾಗಿದೆ ಎಂದು ನಾವು ಹೇಳುತ್ತೇವೆ. ನಾವು ಈ ಇತಿಹಾಸದ ಸರಪಳಿಯ ಕೊಂಡಿಗಳಾಗಿದ್ದೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read