ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಹಾಗೂ ನಾಳೆ ಎರಡು ದಿನ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದಾರೆ.
ರಾಅಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರ್ಯಾಡಿಸನ್ ಬ್ಲೂ ಹೋಟೆಲ್, ಅರಮನೆಯಲ್ಲಿ ಹಾಗೂ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಮೈಸೂರು ಕಮಿಷ್ನರ್ ಸೀಮಾ ಲಾಟಕರ್ ನಗರದಲ್ಲಿನ ಭದ್ರತೆಯನ್ನು ಪರಿಶೀಲನೆ ನಡೆಸಿದರು. ಡಿಸಿಪಿಗಳಾದ ಬಿಂದು ಮಣಿ ಹಾಗೂ ಸುಂದರ್ ರಾಜ್ ಸಾಥ್ ನೀಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಧ್ಯಾಹ್ನ 3;10ಕ್ಕೆ ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ. ಅಲ್ಲಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳನ್ನು ಸ್ವಾಗತಿಸಲಿದ್ದಾರೆ. ಬಳಿಕ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ನಾಳೆ ಬೆಳಿಗ್ಗೆ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ.