ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮಮಂದಿರಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇದೇ ಮೊದಲ ಬಾರಿಗೆ ಅಯೋಧ್ಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ.

ಆದಿವಾಸಿ ಎಂಬ ಕಾರಣಕ್ಕೆ ಅಯೋಧ್ಯೆ ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅವರಿಗೆ ಅವಕಾಶ ಕೊಡಲಿಲ್ಲ ಎಂದು ಕಾಂಗ್ರೆಸ್ ಟೀಕಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರಪತಿಯವರ ರಾಮಮಂದಿರ ಭೇಟಿ ಮಹತ್ವ ಪಡೆದುಕೊಂಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಹನುಮಾನ್ ಗಡಿ ದೇವಾಲಯ, ಪ್ರಭು ಶ್ರೀರಾಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನೂತನ ಸಂಸತ್ ಭವನ ಉದ್ಘಾಟನೆ ಸಂದರ್ಭದಲ್ಲಿ ಮತ್ತು ಬಾಲರಾಮನ ಪ್ರತಿಷ್ಠಾಪನೆ ಸಂದರ್ಭದಲ್ಲಿ ರಾಷ್ಟ್ರಪತಿಯವರನ್ನು ಮೋದಿ ನೇತೃತ್ವದ ಸರ್ಕಾರ ಆಹ್ವಾನಿಸಿರಲಿಲ್ಲ. ಅವರು ಆದಿವಾಸಿ ಎನ್ನುವ ಕಾರಣಕ್ಕೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡಿರಲಿಲ್ಲ ಎಂದು ಕಾಂಗ್ರೆಸ್ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಟೀಕಿಸಿತ್ತು.

ಬುಧವಾರ ಸಂಜೆ 4 ಗಂಟೆಗೆ ಅಯೋಧ್ಯೆಗೆ ಆಗಮಿಸಲಿರುವ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಲಿದ್ದಾರೆ. ನಂತರ ರಾಷ್ಟ್ರಪತಿಗಳು ಬಾಲರಾಮನ ದರ್ಶನ ಪಡೆಯಲಿದ್ದಾರೆ. ಸಂಜೆ ಸರಯೂ ನದಿ ದಡದಲ್ಲಿ ಆರತಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read