ರಾಜ್ಯಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ.

ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಎರಡನೇ ಘಟಿಕೋತ್ಸವದಲ್ಲಿ ಅವರು ಭಾಗವಹಿಸಲಿದ್ದಾರೆ. ಸತ್ಯಸಾಯಿ ಗ್ರಾಮದ ಸತ್ಯಸಾಯಿ ಪ್ರೇಮಾಮೃತಂ ಸಭಾಭವನದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ವಿಶ್ವವಿದ್ಯಾಲಯದಲ್ಲಿ ಗ್ರಾಮೀಣ ಹಿಂದುಳಿದ ಮತ್ತು ಬಡತನ ರೇಖೆಗಿಂತ ಕೆಳಗಿರುವ ಮೊದಲ ತಲೆಮಾರಿನ ಸಾಕ್ಷರರಿಗೆ ಉನ್ನತ ಶಿಕ್ಷಣವನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು.

ಘಟಿಕೋತ್ಸವದಲ್ಲಿ ಪ್ರೊ. ವಿಜಯ್ ಶಂಕರ್ ಶುಕ್ಲಾ, ಡಾ. ಪ್ರತಿಮಾ ಮೂರ್ತಿ, ಪುಲ್ಲೆಲ ಗೋಪಿಚಂದ್, ವಿದ್ವಾನ್ ಡಾ.ಆರ್.ಕೆ. ಪದ್ಮನಾಭ್, ಪ್ರೊ. ಅಜಯ್ ಕೆ. ಸೂದ್, ಪದ್ಮಶ್ರೀ ಪುರಸ್ಕೃತ ತುಳಸಿಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಸಂಸ್ಥಾಪಕರಾದ ಸದ್ಗುರು ಮಧುಸೂಧನ ಸಾಯಿ ಸಾನಿಧ್ಯದಲ್ಲಿ ಘಟಿಕೋತ್ಸವ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read