BREAKING NEWS: ಮಹಿಳಾ ದಿನಾಚರಣೆಯಂದೇ ಬಿಜೆಪಿ ಗಿಫ್ಟ್: ರಾಜ್ಯಸಭೆಗೆ ಸುಧಾಮೂರ್ತಿ ನಾಮ ನಿರ್ದೇಶನ

ನವದೆಹಲಿ: ವಿಶ್ವ ಮಹಿಳಾ ದಿನಾಚರಣೆಯಂದೇ ಬಿಜೆಪಿ ಗಿಫ್ಟ್ ನೀಡಿದ್ದು, ಕರ್ನಾಟಕದ ಡಾ. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ. ಸುಧಾಮೂರ್ತಿ ಅವರನ್ನು ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನ ಮಾಡಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ಫೋಸಿಸ್ ಸಹ ಸಂಸ್ಥಾಪಕರಾಗಿರುವ ಸುಧಾ ಮೂರ್ತಿ ಸಾಹಿತಿಯಾಗಿ, ಸೇವಾ ಕಾರ್ಯಗಳ ಮೂಲಕ  ಸಾಮಾಜಿಕ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ.

‘ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ.

ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ’ ಎಂದು ಮೋದಿ ಹಾರೈಸಿದ್ದಾರೆ.

https://twitter.com/narendramodi/status/1766002676070813995

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read