HomeIndiaBIG NEWS: ಪತ್ರಿಕಾ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಮೋದಿ ಸರ್ಕಾರದ ಆದ್ಯತೆ: ಅನುರಾಗ್ ಠಾಕೂರ್

BIG NEWS: ಪತ್ರಿಕಾ ಸ್ವಾತಂತ್ರ್ಯ, ಪತ್ರಕರ್ತರ ಸುರಕ್ಷತೆ ಮೋದಿ ಸರ್ಕಾರದ ಆದ್ಯತೆ: ಅನುರಾಗ್ ಠಾಕೂರ್

ನವದೆಹಲಿ: ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ರಕ್ಷಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ತಾಹಕೂರ್ ಗುರುವಾರ ಹೇಳಿದ್ದಾರೆ.

ಪತ್ರಕರ್ತರ ರಕ್ಷಣೆಗಾಗಿ ನೀತಿ ಚೌಕಟ್ಟುಗಳ ಬಗ್ಗೆ ಪ್ರಶ್ನೆಯನ್ನು ಎತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೋಲಾ ಸೇನ್‌ ಗೆ ಪ್ರತಿಕ್ರಿಯೆ ನೀಡಿದ ಅನುರಾಗ್ ಠಾಕೂರ್, ಪ್ರತಿಯೊಬ್ಬ ವ್ಯಕ್ತಿಗೂ ಇಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಪತ್ರಿಕಾ ಸ್ವಾತಂತ್ರ್ಯವೂ ಇದೆ ಮತ್ತು ಅದು ಭವಿಷ್ಯದಲ್ಲಿಯೂ ಹಾಗೆಯೇ ಉಳಿಯುತ್ತದೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರಕರ್ತರ ಸುರಕ್ಷತೆಗೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಪೂರಕ ಪ್ರಶ್ನೆಗೆ ಪ್ರತಿಕ್ರಿಯಿಸಿದ ಠಾಕೂರ್, ಸದನದಲ್ಲಿ ಇಲ್ಲದ ಪಶ್ಚಿಮ ಬಂಗಾಳದ ಸಂಸದರೊಬ್ಬರು ಮುಖ್ಯ ಪ್ರಶ್ನೆಯನ್ನು ಕೇಳಿದ್ದಾರೆ. ಪತ್ರಕರ್ತರ ಮೇಲಿನ ಹಿಂಸಾಚಾರದ ಹಲವಾರು ಉದಾಹರಣೆಗಳಿಗೆ ಪಶ್ಚಿಮ ಬಂಗಾಳ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular