ಆರ್ ರಂಗನಾಥ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಪ್ರಭುತ್ವ’ ಚಿತ್ರ ಈಗಾಗಲೇ ತನ್ನ ಟ್ರೈಲರ್ ಮೂಲಕವೇ ಭರ್ಜರಿ ಸೌಂಡ್ ಮಾಡಿದ್ದು, ಇಂದು ರಾಜ್ಯಾದ್ಯಂತ ತೆರೆಕಂಡಿದೆ. ರಾಜಕೀಯ ಕುರಿತ ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಂದ ಮೆಚ್ಚುಗೆಯ ಸುರಿಮಳೆಯೇ ಹರಿದು ಬಂದಿದ್ದು, ಸೂಪರ್ ಡೂಪರ್ ಹಿಟ್ ಆಗಲಿದೆ ಎಂದಿದ್ದಾರೆ,
ಈ ಚಿತ್ರವನ್ನು ಮೇಘರಾಜ್ ಮೂವೀಸ್ ಬ್ಯಾನರ್ ನಲ್ಲಿ ರವಿರಾಜ್ ಎಸ್ ಕುಮಾರ್ ನಿರ್ಮಾಣ ಮಾಡಿದ್ದು, ಚೇತನ್ ಚಂದ್ರ ಹಾಗೂ ಪಾವನ ಪ್ರಮುಖ ಪಾತ್ರದಲ್ಲಿದ್ದಾರೆ. ನಾಸರ್, ವಿಜಯ್ ಚೆಂಡೂರ್, ರೂಪಾದೇವಿ, ರಾಜೇಶ್ ನಟರಂಗ, ಅವಿನಾಶ್, ಅಂಬಿಕಾ, ಶರತ್ ಲೋಹಿತಾಶ್ವ, ಆದಿ ಲೋಕೇಶ್ ಉಳಿದ ತಾರಾಂಗಣದಲ್ಲಿದ್ದಾರೆ. ವಿನಯ್ ಮೂರ್ತಿ ಸಂಭಾಷಣೆ, ಎಮಿಲ್ ಮೊಹಮ್ಮದ್ ಸಂಗೀತ ಸಂಯೋಜನೆ ನೀಡಿದ್ದಾರೆ.