HomeLive NewsBIG NEWS : ರಾಜ್ಯದಲ್ಲಿ ಪ್ರತಿ ಟನ್ ಕಬ್ಬಿಗೆ 3,300 ರೂ. ದರ ನಿಗದಿ...

BIG NEWS : ರಾಜ್ಯದಲ್ಲಿ ಪ್ರತಿ ಟನ್ ಕಬ್ಬಿಗೆ 3,300 ರೂ. ದರ ನಿಗದಿ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಪ್ರತಿ ಟನ್ ಕಬ್ಬಿಗೆ 3,300 ರೂ. ದರ ನಿಗದಿ ಮಾಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ, ಅವರೆಲ್ಲರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಯ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳಿದಾಗ 3,200 ರೂ.ಗಳಿಗೆ ಅವರು ಒಪ್ಪಿರಲಿಲ್ಲ, ನಂತರದಲ್ಲಿ ಒಪ್ಪಿಕೊಂಡರು. 50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ.

10.25 ರಿಕವರಿ ಇದ್ದರೆ 3,100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3,200 ಜೊತೆಗೆ 100 ರೂ. ಸೇರಿದಂತೆ ಒಟ್ಟು ₹3,300 ಒದಗಿಸಲಾಗುವುದು. ಈ ಬಗ್ಗೆ ಸರ್ಕಾರದ ಆದೇಶ ಸಹ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular