HomeKarnatakaಬೆಲೆ ಏರಿಕೆ ನಡುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ತೆಂಗಿನಕಾಯಿ ದರ ಭಾರೀ ಏರಿಕೆ

ಬೆಲೆ ಏರಿಕೆ ನಡುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ತೆಂಗಿನಕಾಯಿ ದರ ಭಾರೀ ಏರಿಕೆ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತೆಂಗಿನಕಾಯಿ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

ಈ ಮೊದಲು ಒಂದು ತೆಂಗಿನಕಾಯಿಗೆ 20, 25, 30 ರೂ. ದರ ಇತ್ತು. ಈಗ 35, 40ರೂ.ವರೆಗೆ ಮಾರಾಟವಾಗುತ್ತಿದೆ. ಕೆಜಿಗೆ 32 -33 ಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಈಗ 48 ರಿಂದ 52 ರೂ.ಗೆ ತಲುಪಿದೆ. ಕ್ವಿಂಟಾಲ್ ಗೆ 5000 ರೂ. ಗಡಿ ದಾಟಿ ದಾಖಲೆ ಬರೆದಿದೆ.

ತಿಪಟೂರು, ತುಮಕೂರು, ಅರಸೀಕೆರೆ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯಲಾಗುತ್ತದೆ. ಕೆಲವೆಡೆ ದರ ಕಡಿಮೆ ಇದೆ. ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲಿ ತೆಂಗಿನಕಾಯಿ ದರ ಹೆಚ್ಚಳವಾಗಿದೆ. ಕೊಬ್ಬರಿ ಬೆಲೆ ಕೂಡ ಏರಿಕೆಯಾಗಿದೆ. ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆ ಹೋಲ್ ಸೇಲ್ ಅಂಗಡಿಗಳಲ್ಲಿ ಒಣ ಕೊಬ್ಬರಿ ಕೆಜಿಗೆ 240- 270 ರೂ.ವರೆಗೆ ಮಾರಾಟವಾಗುತ್ತಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 300 ರೂ. ತಲುಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಂಗಿನ ಇಳುವರಿ ಕಡಿಮೆಯಾಗಿದೆ. ಎಳನೀರಿಗೂ ಭಾರಿ ಪ್ರಮಾಣದಲ್ಲಿ ಕೊಯ್ಲು ಮಾಡುವುದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular