HomeKarnatakaBIG NEWS: ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

BIG NEWS: ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಇಂದು ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕ್ಯಾಪ್ಟರ್ ನಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಮೋದಿಯವರ ಜೊತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲಾದವರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular