BREAKING : ಬೆಂಗಳೂರಿಗೆ ಆಗಮಿಸಿದ ‘ಪ್ರಧಾನಿ ಮೋದಿ’ : ಸ್ವಾಗತ ಕೋರಿದ ಬಿಜೆಪಿ ನಾಯಕರು

ಬೆಂಗಳೂರು : ಬೆಂಗಳೂರಿಗೆ ಪ್ರಧಾನಿ ಮೋದಿ ಇದೀಗ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ನಲ್ಲಿ ಪ್ರಧಾನಿ ಮೋದಿಗೆ ರಾಜ್ಯ ಬಿಜೆಪಿ ನಾಯಕರು  ಸ್ವಾಗತ ಕೋರಿದ್ದಾರೆ.

ಬಿಜೆಪಿ ನಾಯಕರಾದ ಸಂಸದ ತೇಜಸ್ವಿ ಸೂರ್ಯ, ಎಸ್ ಮುನಿಸ್ವಾಮಿ, ಭೈರತಿ ಬಸವರಾಜ್, ಮಂಜುಳಾ ಲಿಂಬಾವಳಿ ಮತ್ತಿತರರು ಸ್ವಾಗತ ಕೋರಿದರು. ಗ್ರೀಸ್ ದೇಶದಿಂದ ನೇರವಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿಗೆ ವಿವಿಧ ಕಲಾ ತಂಡಗಳು ಕೂಡ ಏರ್ ಪೋರ್ಟ್ ನಲ್ಲಿ ಸ್ವಾಗತ ಕೋರಿದೆ.

ಭಾರತದ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದುಈ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಬಂದಿದ್ದಾರೆ. ಕೆಲಹೊತ್ತು ಏರ್ ಪೋರ್ಟ್ ನಲ್ಲಿ ವಿಶ್ರಾಂತಿ ಪಡೆದು ನಂತರ ಇಸ್ರೋ ಕೇಂದ್ರಕ್ಕೆ ತೆರಳಲಿದ್ದಾರೆ.

ವಾಹನ ಸಂಚಾರ ನಿರ್ಬಂಧ

ಬೆಳಿಗ್ಗೆ 4:30ರಿಂದ ಬೆಳಿಗ್ಗೆ 9:30ರವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ. ಹಳೇ ಏರ್ ಪೋರ್ಟ್ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರೀ ಸರ್ಕಲ್) ಸಿ.ವಿ.ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ) ಮಾಗಡಿ ರಸ್ತೆ, ಗೊರಗುಂಟೆ ಪಾಳ್ಯ ಜಂಕ್ಷನ್ ನಿಂದ ಸೋಮನಹಳ್ಳಿ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ಇಂದು ಬೆಳಗ್ಗೆ 4.30 ರಿಂದ ಬೆಳಗ್ಗೆ 9.30 ರವರೆಗೆ ಹಳೆ ವಿಮಾನ ನಿಲ್ದಾಣ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ. ರಾಮನ್ ರಸ್ತೆ, ಯಶವಂತಪುರ ಮೇಲ್ಸುತೇವೆ, ಮಾಗಡಿ ರಸ್ತೆ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆ ಬದಲು ಪರ್ಯಾಯ ರಸ್ತೆಗಳನ್ನು ಬಳಸಲು ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.ಈ ಮಾರ್ಗದಲ್ಲಿ ಇಂದು ಮುಂಜಾನೆ 4ರಿಂದ ಬೆಳಿಗ್ಗೆ 11 ಗಂಟೆಯವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read