HomeLatest NewsBREAKING : ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ : ಸ್ವಾಗತ ಕೋರಿದ ಸಚಿವ ದಿನೇಶ್ ಗುಂಡೂರಾವ್.!

BREAKING : ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ : ಸ್ವಾಗತ ಕೋರಿದ ಸಚಿವ ದಿನೇಶ್ ಗುಂಡೂರಾವ್.!

ಮಂಗಳೂರು : ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನವಾಗಿದ್ದು, ಉಡುಪಿಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ.

ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು, ಬಳಿಕ ಅಲ್ಲಿಂದ ನೇರವಾಗಿ ಸೇನಾ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಬಂದಿಳಿದಿದ್ದಾರೆ. ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಮತ್ತಿತರರು ಸ್ವಾಗತ ಕೋರಿದರು.

ಪ್ರಧಾನಿ ಮೋದಿಗೆ ಸ್ವಾಗತ ಕೋರಲು. ಹುಲಿ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಉಡುಪಿಯಲ್ಲಿ ಕಾಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ‘ಲಕ್ಷ ಕಂಠ ಗೀತಾ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.

1 ತಿಂಗಳ ಕಾಲ ಉಡುಪಿ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ ನಡೆಯಲಿದ್ದು, ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. ಅಂದರೆ 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ 10 ಶ್ಲೋಕ ಪಠಿಸಲಿದ್ದಾರೆ.

ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಗೀತಾ ಜಯಂತಿ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular