BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ |P.M Modi

ನವದೆಹಲಿ : ವೃಕ್ಷಮಾತೆ ‘ತುಳಸಿಗೌಡ’ ನಿಧನರಾಗಿದ್ದು, ಪ್ರಧಾನಿ ಮೋದಿ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ‘’ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read