Bengaluru : ‘ತೇಜಸ್’ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ ಅದ್ಭುತ ಅನುಭವ ಎಂದ ಪ್ರಧಾನಿ ಮೋದಿ

ಬೆಂಗಳೂರು : ಬೆಂಗಳೂರಿಗೆ ಇಂದು ಆಗಮಿಸಿದ ಪ್ರಧಾನಿ ಮೋದಿ ಹೆಚ್ ಎ ಎಲ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ನಂತರ ಪ್ರಧಾನಿ ಮೋದಿ ತೇಜಸ್ ಯುದ್ದ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ ಹೆಚ್ ಎ ಎಲ್ ಸಾಧನೆಯನ್ನು ಕೊಂಡಾಡಿ ಯುದ್ದ ವಿಮಾನದಲ್ಲಿ ಹಾರಾಟ ನಡೆಸಿದ ಫೋಟೋಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

‘’ನಾನು ಬಹಳ ಹೆಮ್ಮೆಯಿಂದ ಹೇಳಬಲ್ಲೆ, ನಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದಾಗಿ, ಸ್ವಾವಲಂಬನೆ ಕ್ಷೇತ್ರದಲ್ಲಿ ನಾವು ವಿಶ್ವದ ಯಾರಿಗಿಂತಲೂ ಕಡಿಮೆಯಿಲ್ಲ. ಭಾರತೀಯ ವಾಯುಪಡೆ, ಡಿಆರ್ಡಿಒ ಮತ್ತು ಎಚ್ಎಎಲ್ ಮತ್ತು ಎಲ್ಲಾ ಭಾರತೀಯರಿಗೆ ಮನದಾಳದ ಅಭಿನಂದನೆಗಳು.’’ ಎಂದು ಟ್ವೀಟ್ ಮಾಡಿದ್ದಾರೆ.

ತೇಜಸ್ ಯುದ್ಧ ವಿಮಾನದಲ್ಲಿ ಒಂದು ಪಯಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅನುಭವ ವಿಸ್ಮಯಕಾರಿಯಾಗಿತ್ತು. ಇದೊಂದು ಅದ್ಬುತ ಅನುಭವ ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

https://twitter.com/narendramodi/status/1728309121060090253

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read