BREAKING: ಕೆಂಪುಕೋಟೆ ಮೇಲೆ ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ

ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ನೆಹರು ಮತ್ತು ಇಂದಿರಾಗಾಂಧಿಯವರ ದಾಖಲೆ ಸರಿಗಟ್ಟಿದ್ದಾರೆ.

ಮೊದಲಿಗೆ ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಮೋದಿ ಅಲ್ಲಿಂದ ಕೆಂಪುಕೋಟೆಗೆ ಆಗಮಿಸಿದ್ದಾರೆ. ಸೇನಾಪಡೆಗಳಿಂದ ಗೌರವವಂದನೆ ಸ್ವೀಕರಿಸಿದ ಬಳಿಕ ಕೆಂಪು ಕೋಟೆಯ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ.

2014ರಿಂದ ಸತತವಾಗಿ 11ನೇ ಬಾರಿಗೆ ಮೋದಿ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಹೆಲಿಕಾಪ್ಟರ್ ಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ. ಸೇನಾಪಡೆಗಳಿಂದ ಆಕರ್ಷಕ ಕವಾಯತು ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read