Vande Bharat Express : ಧಾರವಾಡ-ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ರಾಜ್ಯದ ಎರಡನೇ ಧಾರವಾಡ-ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ 10.30 ಕ್ಕೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಹಸಿರು ಬಾವುಟ ಹಾರಿಸುವ ಮೂಲಕ ವರ್ಚುವಲ್ ಆಗಿ ಚಾಲನೆ ನೀಡಿದರು. ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡಲಿದೆ. ಧಾರವಾಡದಲ್ಲಿ ರಾಜ್ಯಪಾಲ ಗೆಹ್ಲೋಟ್, ಕೇಂದ್ರ ಸಚಿವ ಜೋಶಿ ಹಸಿರು ನಿಶಾನೆ ತೋರಿಸಿದ್ದಾರೆ.

ಬೆಂಗಳೂರು -ಧಾರವಾಡ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸೇರಿದಂತೆ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದ್ದಾರೆ. ಏಕಕಾಲದಲ್ಲಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಚಾಲನೆ ಸಿಕ್ಕಿದೆ.ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ 10.30 ಕ್ಕೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ವರ್ಚುವಲ್ ಮೂಲಕ ಐದು ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.

ಧಾರವಾಡ -ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಬೆಳಗ್ಗೆ ಧಾರವಾಡದಿಂದ ಹೊರಟು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ದಾವಣಗೆರೆಗೆ ಆಗಮಿಸಲಿದೆ. ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭೋಪಾಲ್ –ಇಂದೋರ್, ಭೋಪಾಲ್ –ಜಬಲ್ಪುರ, ರಾಂಚಿ –ಪಾಟ್ನಾ, ಮಡಗಾಂವ್ – ಮುಂಬೈ ಮಾರ್ಗದ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಮೋದಿ ಚಾಲನೆ ನೀಡಿದ್ದಾರೆ.ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read