HomeIndiaBREAKING : ‘ಪ್ರಧಾನಿ ಮೋದಿ’ ಪ್ರಮಾಣವಚನ ಸ್ವೀಕಾರ ಒಂದು ದಿನ ಮುಂದಕ್ಕೆ, ಜೂ.9 ಕ್ಕೆ ನಿಗದಿ..!

BREAKING : ‘ಪ್ರಧಾನಿ ಮೋದಿ’ ಪ್ರಮಾಣವಚನ ಸ್ವೀಕಾರ ಒಂದು ದಿನ ಮುಂದಕ್ಕೆ, ಜೂ.9 ಕ್ಕೆ ನಿಗದಿ..!

ನವದೆಹಲಿ : ‘ಪ್ರಧಾನಿ ಮೋದಿ’ ಪ್ರಮಾಣವಚನ ಸ್ವೀಕಾರ ಒಂದು ದಿನ ಮುಂದಕ್ಕೆ ಹೋಗಿದ್ದು, ಜೂ.9 ಕ್ಕೆ ನಿಗದಿಯಾಗಿದೆ.

ಈ ಮೊದಲು ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿತ್ತು. ಆದರೀಗ ಪ್ರಧಾನಿ ಮೋದಿ’ ಪ್ರಮಾಣವಚನ ಸ್ವೀಕಾರ ಒಂದು ದಿನ ಮುಂದಕ್ಕೆ ಹೋಗಿದ್ದು, ಜೂ.9 ಕ್ಕೆ ನಿಗದಿಯಾಗಿದೆ. ಹಾಗೂ ಸಂಸದ ಕುಮಾರಸ್ವಾಮಿ ಅವರು ಕೂಡ ಜೂ.9 ರಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಆದರೆ, ಕಾರ್ಯಕ್ರಮವನ್ನು ಈಗ ಮುಂದೂಡಲಾಗುತ್ತಿದೆ. ವರದಿಗಳ ಪ್ರಕಾರ, ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಯ್ಡು ಅವರ ಪ್ರಮಾಣವಚನವನ್ನು ಆರಂಭದಲ್ಲಿ ಯೋಜಿಸಲಾದ ದಿನಾಂಕವಾದ ಜೂನ್ 9 ರ ಬದಲು ಜೂನ್ 12 ಕ್ಕೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.9 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಿಂದ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಆದರೆ ಈ ಬಾರಿ ಗೆಲುವಿನ ಅಂತರ ಭಾರೀ ಕಡಿಮೆಯಾಗಿದೆ. ಮೋದಿ ಅವರು 1,52,513 ಮತಗಳ ಅಂತರದಿಂದ ಕಾಂಗ್ರೆಸ್ ಅಜಯ್ ರೈ ಅವರನ್ನು ಸೋಲಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular