ನವದೆಹಲಿ : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ. ಪ್ರಧಾನಿ ಮೋದಿ ಕೂಡ ಟ್ವೀಟ್ ನಲ್ಲಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ.
https://twitter.com/narendramodi/status/1719561406759293173?ref_src=twsrc%5Etfw%7Ctwcamp%5Etweetembed%7Ctwterm%5E1719561406759293173%7Ctwgr%5Eeacc0e852a070f91e9f0dd02813e8596b3661e08%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fkarnataka-rajyotsava-celebration-live-updates-on-karnataka-formation-day-karnataka-sambhrama-50-cm-siddaramaiah-latest-news-vkb-706470.html