ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಒಡಿಶಾದ ಮಯೂರ್ಭಂಜ್ನ ಉಪರ್ಬೇಡಾ ಗ್ರಾಮದಲ್ಲಿ 1958 , ಜೂನ್ 20 ರಂದು ಜನಿಸಿದ ಮುರ್ಮು ಕಳೆದ ವರ್ಷ ಜುಲೈ 25 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.
“ರಾಷ್ಟ್ರಪತಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಮ್ಮ ಜನರ ಕಲ್ಯಾಣಕ್ಕಾಗಿ ಬುದ್ಧಿವಂತಿಕೆ, ಘನತೆ ಮತ್ತು ಬದ್ಧತೆಯ ದೀಪವಾದ ಅವರು ರಾಷ್ಟ್ರದ ಪ್ರಗತಿಯನ್ನು ಹೆಚ್ಚಿಸುವ ಪ್ರಯತ್ನಗಳಿಗಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಸಮರ್ಪಣೆ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1670958847219970048?ref_src=twsrc%5Etfw%7Ctwcamp%5Etweetembed%7Ctwterm%5E1670958847219970048%7Ctwgr%5Ee77ae4413d49d3f6ac9c746a3f9decdb85fe9818%7Ctwcon%5Es1_&ref_url=https%3A%2F%2Fwww.indiatvnews.com%2Fnews%2Findia%2Fpm-modi-birthday-wishes-to-president-droupadi-murmu-before-departing-for-pm-modi-us-visit-updates-rath-yatra-wishes-a-beacon-of-wisdom-dignity-2023-06-20-876911