BIG NEWS: ನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರವಾಸ; ಸಿಎಂ ತವರಲ್ಲೇ ಬಿಜೆಪಿ ಅಭ್ಯರ್ಥಿ ಪರ ಅಬ್ಬರದ ಪ್ರಚಾರ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಇಂದಿನಿಂದ ಏಪ್ರಿಲ್ 18ರವರೆಗೆ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಏಪ್ರಿಲ್ 19 ರಂದು ಸಾರ್ವತ್ರಿಕ ಮತದಾನ ನಡೆಯಲಿದೆ.

ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿಯವರು ದೇಶದಾದ್ಯಂತ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮೊದಲ ಹಂತದ ಮತದಾನ ನಡೆಯಲಿರುವ ಮೈಸೂರು ಹಾಗೂ ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪನವರು ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದು, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಈ ಬಾರಿಯೂ ಸಹ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read