ಜೋಡಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ನೇಣು ಬಗೆದುಕೊಂಡು ಆತ್ಮಹತ್ಯೆಗೆ ಶರಣದ ಘಟನೆ ಭಾನುವಾರ ನಡೆದಿದೆ.

2013ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಗದಗ ಜಿಲ್ಲೆ ರೋಣ ತಾಲೂಕಿನ ಸಂದಿಗವಾಡ ಗ್ರಾಮದ 47 ವರ್ಷದ ಬಸವರಾಜ ಬಸಪ್ಪ ಹೊಸೂರ ಆತ್ಮಹತ್ಯೆ ಮಾಡಿಕೊಂಡ ಕೈದಿ.

ಪತ್ನಿ ಜತೆ ಜಗಳವಾಡುವಾಗ ಬಿಡಿಸಲು ಬಂದಿದ್ದ ದೊಡ್ಡಪ್ಪನ ಮಗ ಮತ್ತು ಆತನ ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದ ಬಸವರಾಜ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಜೈಲಿನಲ್ಲಿ ಉತ್ತಮ ನಡತೆ ಬೆಳೆಸಿಕೊಂಡಿದ್ದ ಬಸವರಾಜ ಕಾರಾಗೃಹದಲ್ಲಿ ಹಸುಗಳ ಹಾಲು ಕರೆಯುವ ಕೆಲಸ ಕೂಡ ಮಾಡುತ್ತಿದ್ದ. ಭಾನುವಾರ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read