HomeKarnatakaBREAKING : ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ ; ಪೊಲೀಸರಿಂದ...

BREAKING : ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ ; ಪೊಲೀಸರಿಂದ ಲಾಠಿ ಚಾರ್ಜ್.!

ಬೆಂಗಳೂರು :  ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ಉಂಟಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತ್ತೀಚೆಗೆ ಸರಣಿ ಅಕ್ರಮಗಳು ಬಯಲಾದ ಬೆನ್ನಲ್ಲೇ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಜೈಲಿನೊಳಗೆ ನಿಷೇಧಿತ ವಸ್ತುಗಳ ಪೂರೈಕೆಯನ್ನು ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಕಾರ್ಯಾಚರಣೆಯ ಭಾಗವಾಗಿ ಕೈದಿಗಳ ಬ್ಯಾರಕ್‌ಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ಜಗಳ ಆರಂಭವಾಗಿದೆ ಎನ್ನಲಾಗಿದೆ.

ಜೈಲು ಸಿಬ್ಬಂದಿ ಮತ್ತು ಪೊಲೀಸರು ಕೈದಿಗಳ ಕೊಠಡಿಗಳನ್ನು ತಪಾಸಣೆ ಮಾಡಲು ಹೋದಾಗ ಕೆಲವು ಕೈದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಕೈದಿಗಳು ಗುಂಪುಗೂಡಿ ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಕೈದಿಗಳು ಜೈಲಿನ ಆವರಣದಲ್ಲಿ ಗದ್ದಲ ಎಬ್ಬಿಸಿ ಭದ್ರತಾ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು ತಕ್ಷಣ ಹೆಚ್ಚಿನ ಪೊಲೀಸ್ ಪಡೆಯನ್ನು ಕರೆಸಿದ್ದಾರೆ. ಉದ್ವಿಗ್ನ ಸ್ಥಿತಿಯನ್ನು ಹತೋಟಿಗೆ ತರಲು ಮತ್ತು ಕೈದಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಮಾರ್ಚ್ 29 ರಂದು ರಾತ್ರಿ 11:45 ರ ವೇಳೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೈದಿಗಳಾದ ಇನಾಯ್ ಜಾಯ್, ವೋಕು ಆರೆಂಜಿ ಪ್ಯಾಟ್ರಿಕ್, ಕೋರಿಲ್ ಡೇನಿಯಲ್, ಥಾಮಸ್ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್(FIR) ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular