ಶಕ್ತಿ ಯೋಜನೆಯಿಂದ ನಷ್ಟಕ್ಕೊಳಗಾದ ಖಾಸಗಿ ಬಸ್, ಕ್ಯಾಬ್, ರಿಕ್ಷಾ ಮಾಲೀಕರಿಗೆ ಗುಡ್ ನ್ಯೂಸ್: ಪರಿಹಾರ ಘೋಷಣೆ ಸಾಧ್ಯತೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ನಷ್ಟಕ್ಕೆ ಒಳಗಾದ ಖಾಸಗಿ ಬಸ್, ಕ್ಯಾಬ್, ರಿಕ್ಷಾ ಚಾಲಕರಿಗೆ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ.

ಖಾಸಗಿ ಸಾರಿಗೆ ಉದ್ಯಮ ವಿವಿಧ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರ್ಕಾರದಿಂದ ಇದಕ್ಕಾಗಿ ಕೈಗೊಳ್ಳಬೇಕಿರುವ ಪರಿಹಾರ ಕ್ರಮಗಳು ಮತ್ತು ಸಾರಿಗೆ ಉದ್ಯಮದ ನಷ್ಟದ ಬಗ್ಗೆ ವರದಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಇಲಾಖೆ ಸೂಚನೆ ನೀಡಿದ್ದು, ವರದಿ ಆಧರಿಸಿ ಪರಿಹಾರ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೊರೋನಾ ಸೇರಿ ವಿವಿಧ ಕಾರಣದಿಂದ 3-4 ವರ್ಷಗಳಿಂದ ಸಾರಿಗೆ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರದ ಶಕ್ತಿ ಯೋಜನೆಯ ಉಚಿತ ಪ್ರಯಾಣದಿಂದ ಸಮಸ್ಯೆ ಹೆಚ್ಚಾಗಿದೆ. ಖಾಸಗಿ ಬಸ್, ಕ್ಯಾಬ್, ಆಟೋಗಳಿಗೆ ಪ್ರಯಾಣಿಕರ ತೀವ್ರ ಕೊರತೆ ಎದುರಾಗಿ ನಷ್ಟಕ್ಕೊಳಗಾಗಿದೆ. ಹೀಗಾಗಿ ಪರಿಹಾರ ಕೊಡಬೇಕೆಂದು ಸಂಘಟನೆಗಳು ಹೋರಾಟ ನಡೆಸಿದ್ದವು. ಸಾರಿಗೆ ಸಚಿವರು ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದು, ಸಿಎಂ ಜೊತೆಗೆ ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಹಾರ ಕ್ರಮಗಳ ಕುರಿತು ಸಾರಿಗೆ ಇಲಾಖೆಗೆ ವರದಿ ನೀಡಲು ಸಿಎಂ ಸೂಚಿಸಿದ್ದಾರೆ. ವರದಿ ಆಧರಿಸಿ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read