HomeKarnatakaಸಾಲು ಸಾಲು ರಜೆ: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್: ದುಪ್ಪಟ್ಟಾಯ್ತು ಖಾಸಗಿ ಬಸ್...

ಸಾಲು ಸಾಲು ರಜೆ: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್: ದುಪ್ಪಟ್ಟಾಯ್ತು ಖಾಸಗಿ ಬಸ್ ದರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ದೀಪಾವಳಿ ಹಬ್ಬದ ಜೊತೆಗೆ ವಾರಾಂತ್ಯ ರಜೆ ಒಟ್ಟಿಗೆ ಬಂದಿದ್ದು, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ, ಪ್ರವಾಸಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ.

ಇದೇ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡ ಖಾಸಗಿ ಬಸ್ ಗಳು ಪ್ರಯಾಣದರ ಹೆಚ್ಚಳ ಮಾಡಿವೆ. ಕೆಲವು ಬಸ್ ಗಳು ಟಿಕೆಟ್ ದರವನ್ನು ಎರಡು ಪಟ್ಟು, ಮೂರು ಪಟ್ಟು ಹೆಚ್ಚಳ ಮಾಡಿವೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಖಾಸಗಿ ಬಸ್ ಗಳಲ್ಲಿ 700 ರಿಂದ 1000 ರೂ.ವರೆಗೆ ಇದ್ದ ದರ ಈಗ 1500 ರಿಂದ 3000 ರೂ.ವರೆಗೆ ಹೆಚ್ಚಳ ಮಾಡಲಾಗಿದೆ. ಮಂಗಳೂರಿಗೆ 700 ರಿಂದ 950 ರೂ.ವರೆಗೆ ಇದ್ದ ಟಿಕೆಟ್ ದರ 1400ನಿಂದ 2000 ರೂ.ವರೆಗೆ ಹೆಚ್ಚಳವಾಗಿದೆ. ಇದೇ ರೀತಿ ರಾಜ್ಯದ ವಿವಿಧ ನಗರಗಳಿಗೆ ತೆರಳುವವರಿಗೆ ಬಸ್ ಖಾಸಗಿ ಬಸ್ ನವರು ಬರೆ ಎಳೆದಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ವತಿಯಿಂದ ದೀಪಾವಳಿ ಪ್ರಯುಕ್ತ 2000 ವಿಶೇಷ ಬಸ್ ಗಳನ್ನು ಕಾರ್ಯಾಚರಣೆಗೆ ಇಳಿಸಲಾಗುವುದು. ನವೆಂಬರ್ 10 ರಿಂದ ಕೆಎಸ್ಆರ್ಟಿಸಿ ವಿಶೇಷ ಬಸ್ ಗಳು ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಮತ್ತು ಹೊರ ರಾಜ್ಯಗಳಿಗೆ ಕೆಎಸ್ಆರ್ಟಿಸಿ ವಿಶೇಷ ಬಸ್ ಗಳು ಕಾರ್ಯಾಚರಣೆ ನಡೆಸಲಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular