HomeKarnatakaಮುಷ್ಕರಕ್ಕೆ ಮುಂದಾದ ಖಾಸಗಿ ಸಾರಿಗೆ ಒಕ್ಕೂಟ: ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸೇರಿ ಇತರೆ ಸೇವೆ...

ಮುಷ್ಕರಕ್ಕೆ ಮುಂದಾದ ಖಾಸಗಿ ಸಾರಿಗೆ ಒಕ್ಕೂಟ: ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸೇರಿ ಇತರೆ ಸೇವೆ ಬಂದ್ ಸಾಧ್ಯತೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಗಡುವು ನೀಡಿರುವ ಖಾಸಗಿ ಸಾರಿಗೆ ಒಕ್ಕೂಟ ಬೇಡಿಕೆ ಈಡೇರಿಸದಿದ್ದರೆ ಮುಷ್ಕರಕ್ಕೆ ಸಿದ್ಧತೆ ಕೈಗೊಂಡಿದೆ.

2023ರ ಸೆಪ್ಟಂಬರ್ 12ರಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಸಾರಿಗೆ ಮುಷ್ಕರ ಕೈಗೊಳ್ಳಲಾಗಿತ್ತು. ಈ ವೇಳೆ ಸರ್ಕಾರದ ಮುಂದೆ ವಿವಿಧ ಬೇಡಿಕೆ ಇಟ್ಟಿದ್ದು, ಇದುವರೆಗೆ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಹೀಗಾಗಿ ಮತ್ತೊಮ್ಮೆ ಖಾಸಗಿ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಾರ್ಚ್ 22ರೊಳಗೆ ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು. ಇಲ್ಲದಿದ್ದಲ್ಲಿ ಮಾರ್ಚ್ 24ಕ್ಕೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಸಭೆ ಕರೆದು ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದು ಖಾಸಗಿ ಸಾರಿಗೆ ಸಂಘಟನೆಗಳು ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ/

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಬಸ್, ಆಟೋ, ಟ್ಯಾಕ್ಸಿ, ಸ್ಕೂಲ್ ಬಸ್, ಗೂಡ್ಸ್ ವಾಹನಗಳು ಸೇರಿ ಎಲ್ಲ ರೀತಿಯ ಖಾಸಗಿ ಸಾರಿಗೆ ವ್ಯವಸ್ಥೆ ಸ್ಥಗಿತ ಮಾಡಲು ಮುಂದಾಗಿದ್ದು, 65 ಸಂಘಟನೆಗಳು ಬೆಂಬಲ ನೀಡಿವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular