SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಡಿ.7 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ವಾಕ್ ಇನ್ ಇಂಟರ್ ವ್ಯೂನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ ಡಿಪ್ಲೋಮ, ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ: 7483808321 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read