ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ಖಾಸಗಿ ವಿಮಾನವೊಂದು ಪತನಗೊಂಡಿದ್ದು, ಅದೃಷ್ಟವಶಾತ್ ಪೈಲಟ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಉತ್ತರ ಪ್ರದೇಶದ ಫರೂಕಾಬಾದ್ನಲ್ಲಿ ಈ ಘಟನೆ ನಡೆದಿದೆ. ಟೇಕಾಫ್ ಆಗುವಾಗ ನಿಯಂತ್ರಣ ಕಳೆದುಕೊಂಡ ಖಾಸಗಿ ವಿಮಾನ ಪತನಗೊಂಡಿದೆ. ಸದ್ಯ ಪೈಲಟ್ಗಳು ಮತ್ತು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನಿಯಂತ್ರಣ ತಪ್ಪಿದ ನಂತರ, ವಿಮಾನವು ಪೊದೆಗಳ ಮೇಲೆ ಬಿದ್ದಿದೆ.

