ಶೇ. 100ರಷ್ಟು ಫಲಿತಾಂಶಕ್ಕೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಹೊರಹಾಕಲು ಖಾಸಗಿ ಶಾಲೆಗಳ ಕುತಂತ್ರ

ಬೆಂಗಳೂರು: ಶೇ. 100ರಷ್ಟು ಫಲಿತಾಂಶಕ್ಕೆ ಕೆಲವು ಖಾಸಗಿ ಶಾಲೆಗಳು ಕುತಂತ್ರ ನಡೆಸಿವೆ. ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಹೊರ ಹಾಕಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿವೆ. ಇಂತಹ ಘಟನೆ ಬೆಳಕಿಗೆ ಬಂದಲ್ಲಿ ಅಂತಹ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸುವುದಾಗಿ ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.

ಖಾಸಗಿ ಶಾಲೆಗಳು ಶೇಕಡ 100ರಷ್ಟು ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಎಸ್ಎಸ್ಎಲ್ಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸುವ ಕುತಂತ್ರ ನಡೆಸಿದಲ್ಲಿ ಶಾಲಾ ಮಾನ್ಯತೆ ಹಾಗೂ ಶಾಲಾ ಸಂಕೇತ ರದ್ದು ಮಾಡಲಾಗುವುದು ಎಂದು ಹೇಳಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. ಕೆಲವು ಖಾಸಗಿ ಶಾಲೆಗಳು ಕಲಿಕೆಯಲ್ಲಿ ಹಿಂದಳಿದ ಮಕ್ಕಳ ಅಥವಾ ಫೇಲಾಗಬಹುದೆಂದು ಅಂದಾಜಿಸಿದ ಮಕ್ಕಳಿಗೆ ವರ್ಗಾವಣೆ ಪ್ರಮಾಣ ಪತ್ರ ನೀಡಿ ಖಾಸಗಿ ಅಭ್ಯರ್ಥಿಗಳಾಗಿ ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read