BREAKING: ಬೇಡಿಕೆ ಈಡೇರಿಸುವುದಾಗಿ ಸಚಿವರ ಭರವಸೆ; ಬಂದ್ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು: 32 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಹಿಂಪಡೆಯಲಾಗಿದೆ. ಖಾಸಗಿ ಸಾರಿಗೆ ಚಾಲಕರ ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಅರ್ಧಕ್ಕೆ ಕೈಬಿಡಲಾಗಿದೆ.

ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಆಟೋ, ಟ್ಯಾಕ್ಸಿ, ಖಾಸಗಿ ಬಸ್, ಓಲಾ, ಊಬರ್ ಸೇರಿದಂತೆ ಖಾಸಗಿ ಸಾರಿಗೆ ಒಕ್ಕೂಟದವರು ನಿನ್ನೆ ರಾತ್ರಿ 12 ಗಂಟೆಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಬಂದ್ ಗೆ ಕರೆ ನೀಡಿದ್ದರು. ಶಕ್ತಿ ಯೋಜನೆ ವಿರುದ್ಧ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ, ಖಾಸಗಿ ವಾಹನ ಚಾಲಕರ ಅಹವಾಲು ಸ್ವೀಕರಿಸಿದ್ದು, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟದ 32 ಬೇಡಿಕೆಗಳಲ್ಲಿ 27 ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂದ್ ಹಿಂಪಡೆಯುತ್ತಿದ್ದೇವೆ. ಒಂದು ವೇಳೆ ನಾಳೆ ಸಂಜೆಯೊಳಗೆ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಹೋರಾಟ ನಡೆಸುವುದಾಗಿ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read