HomeKarnatakaBREAKING : ‘ಖಾಸಗಿ ವಿಡಿಯೋ’ ವೈರಲ್ : ಮನನೊಂದು ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

BREAKING : ‘ಖಾಸಗಿ ವಿಡಿಯೋ’ ವೈರಲ್ : ಮನನೊಂದು ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

ದಾವಣಗೆರೆ : ‘ಖಾಸಗಿ ವಿಡಿಯೋ’ ವೈರಲ್ ಆಗಿದ್ದಕ್ಕೆ ಮನನೊಂದು ಇಬ್ಬರು ವಿದ್ಯಾರ್ಥಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ಏಕಾಂತದಲ್ಲಿ ತೊಡಗಿದ್ದರು . ಇದನ್ನು ನೋಡಿದ ಯಾರೋ ವಿಡಿಯೋ ಮಾಡಿ ವೈರಲ್ ಮಾಡಿದ್ದರು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಮನನೊಂದು ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲೂರಟ್ಟಿ ತಾಂಡಾದ ರತನ್ (20) ಹಾಸ್ಟೆಲ್ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಗೆಯೇ ತುಂಬಿಗೆರೆ ಗ್ರಾಮದ ಯುವತಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೋ ವೈರಲ್ ಮಾಡಿದವರ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular