BIG NEWS: ಐಟಿ, ಇಡಿ, ಸಿಬಿಐ ಬಿಜೆಪಿ ಸ್ಟಾರ್ ಪ್ರಚಾರಕರು; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರ್ಗಿ: ಕಾಂಗ್ರೆಸ್ ಗೆ 1823 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಐಟಿ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದು ಬಿಜೆಪಿಯ ತೆರಿಗೆ ಭಯೋತ್ಪಾದನೆಯಾಗಿದ್ದು, ನಮ್ಮನ್ನು ಹೆದರಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಐಟಿ, ಇಡಿ, ಸಿಬಿಐ ಬಿಜೆಪಿಯ ಹೊಸ ಘಟಕಗಳು. ಈ ಘಟಕಗಳಿಂದ ವಿಪಕ್ಷಗಳಿಗೆ ಪ್ರೇಮ ಪತ್ರಗಳು ಬರುತ್ತಿವೆ ಎಂದು ಟೀಕಿಸಿದ್ದಾರೆ.

ಯಾವ ಆಧಾರದ ಮೇಲೆ ಐಟಿ ಇಲಾಖೆ ನೋಟಿಸ್ ನೀಡಿದೆ? ಪಕ್ಷದ ಇತಿಹಾಸದಲ್ಲಿಯೇ ಈ ರೀತಿ ಎಂದೂ ಆಗಿಲ್ಲ. ರಾಜಕೀಯ ಪಕ್ಷಗಳಿಗೆ ತೆರಿಗೆ ವಿನಾಯಿತಿ ಇದೆ. 14 ಲಕ್ಷ ರೂ.ಲೋಪ ಆಗಿದೆ ಅಂತ 1823 ಕೋಟಿ ರೂಪಾಯಿ ಪಾವತಿ ಮಾಡುವಂತೆ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದೆ. 14 ಲಕ್ಷ ರೂ. ಬಗ್ಗೆ ದಾಖಲೆ ನೀಡಿದ್ದೇವೆ. ಆದರೂ ಕೂಡ ದಂಡ ಕಟ್ಟಲು ಹೇಳಿದ್ದಾರೆ. ಬಿಜೆಪಿಯ ಅನಾಮಧೇಯ 92 ಪ್ರಕರಣಗಳಿವೆ. 4.5 ಲಕ್ಷಕ್ಕೆ ದಾಖಲೆಗಳಿಲ್ಲ. ಇದು ಐಟಿ ಇಲಾಖೆಗೆ ಕಾಣುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಐಟಿ, ಇಡಿ, ಸಿಬಿಐ ಬಿಜೆಪಿಯ ಸ್ಟಾರ್ ಪ್ರಚಾರಕರು. ಪ್ರಫುಲ್ ಪಟೇಲ್ ಬಿಜೆಪಿ ಸೇರಿ ಇನ್ನೂ ಹತ್ತು ತಿಂಗಳಾಗಿಲ್ಲ. ಆಗಲೇ ಸಿಬಿಐ ಪ್ರಫುಲ್ ಪಟೇಲ್ ಗೆ ಕ್ಲೀನ್ ಚಿಟ್ ನೀಡಿದೆ. ಇದನ್ನು ಯಾಕೆ ಚುನಾವಣಾ ಆಯೋಗ ಗಮನಿಸುತ್ತಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಐಟಿ, ಇಡಿ, ಸಿಬಿಐ ಈ ಮೂರು ಸಂಸ್ಥೆಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿವೆ. ಬಿಜೆಪಿಯ ಉಳಿದ ಎಲ್ಲಾ ಸೆಲ್ ಗಳು ನಿಷ್ಕ್ರಿಯವಾಗಿವೆ ಎಂದು ಟೀಕಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read