HomeKarnatakaಪಾರದರ್ಶಕತೆ ತರಲು ಕೌನ್ಸೆಲಿಂಗ್ ಮೂಲಕವೇ ನೌಕರರ ವರ್ಗಾವಣೆಗೆ ನಿಯಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಪಾರದರ್ಶಕತೆ ತರಲು ಕೌನ್ಸೆಲಿಂಗ್ ಮೂಲಕವೇ ನೌಕರರ ವರ್ಗಾವಣೆಗೆ ನಿಯಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನೌಕರರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲು ಸೇವಾ ನಿಯಮ ರೂಪಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವರ್ಗಾವಣೆ ನಿಯಮ ರೂಪಿಸುವ ಕುರಿತಾಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಸಲಹೆ ಸೂಚನೆ ನೀಡಿದ ಅವರು, ಈ ಮೂಲಕ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲಾಗುವುದು ಎಂದು ಹೇಳಿದ್ದಾರೆ,

ನಾನು ಖಾತೆ ವಹಿಸಿಕೊಂಡ ಆರಂಭದಲ್ಲಿಯೇ ಪಿಡಿಒ ಮತ್ತು ಪಂಚಾಯಿತಿ ಕಾರ್ಯದರ್ಶಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಕೌನ್ಸೆಲಿಂಗ್ ಪದ್ಧತಿ ಜಾರಿಗೆ ತರುವುದಾಗಿ ಹೇಳಿದ್ದು, 2024-25ನೇ ಸಾಲಿನಲ್ಲಿ ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಮಾಡಲು ನಿಯಮ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular