HomeKarnatakaದಂಡ ವಿಧಿಸಲು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೇ 5000 ರೂ. ದಂಡ

ದಂಡ ವಿಧಿಸಲು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೇ 5000 ರೂ. ದಂಡ

ಕಲಬುರಗಿ: ಅನುಮತಿ ಪರವಾನಿಗೆ ಪಡೆಯದೇ ಬ್ಯಾನರ್ ಹಾಕಿದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮಹಾನಗರ ಪಾಲಿಕೆಯಿಂದ 5000 ರೂ. ದಂಡ ವಿಧಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಆಗಮಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸ್ವಾಗತ ಕೋರಿ ಆಳಂದ ಚೆಕ್ ಪೋಸ್ಟ್ ಬಳಿ ಅವರ ಬೆಂಬಲಿಗರು ಬ್ಯಾನರ್ ಹಾಕಿದ್ದರು. ಆದರೆ, ಬ್ಯಾನರ್ ಅಳವಡಿಸಲು ಯಾವುದೇ ಅನುಮತಿ ಪಡೆದಿರಲಿಲ್ಲ. ಅದರಲ್ಲಿ ಸಚಿವರ ಬ್ಯಾನರ್ ಹಾಕಿದವರ ಹೆಸರು ಇಲ್ಲದ ಹಿನ್ನೆಲೆಯಲ್ಲಿ ಕಲಬುರ್ಗಿ ಪಾಲಿಕೆಯಿಂದ ಸಚಿವರಿಗೆ ದಂಡ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಂಡದ ಹಣ ಪಾವತಿಸಲು ಪ್ರಿಯಾಂಕ್ ಖರ್ಗೆ ಒಪ್ಪಿಕೊಂಡಿದ್ದು, ತಮ್ಮ ಸಿಬ್ಬಂದಿಗೆ ದಂಡದ ಹಣ ಪಾವತಿಸಲು ಸೂಚನೆ ನೀಡಿದ್ದಾರೆ. ಅನುಮತಿ ಪಡೆಯದೆ ಬ್ಯಾನರ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆಗೆ ಪ್ರಿಯಾಂಕ್  ಖರ್ಗೆ ಸೂಚನೆ ನೀಡಿದ್ದು, ಪಾಲಿಕೆಯ ಸಿಬ್ಬಂದಿ ಸಚಿವರಿಗೇ ದಂಡ ವಿಧಿಸಿ ಗಮನ ಸೆಳೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular