HomeKarnatakaಇದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ ; ಸಚಿವ ಪ್ರಿಯಾಂಕ್ ಖರ್ಗೆ

ಇದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಮನೆಬಾಗಿಲಿನಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾ ಸೇವೆ’ ಅಭಿಯಾನಕ್ಕೆ ಚಾಲನೆ ನೀಡಿದೆ. ಕಲಬುರಗಿ ಜಿಲ್ಲೆಯ ಕಮಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಅವರ ಸೇವೆಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಆಡಳಿತವೇ ಅವರ ಮನೆಬಾಗಿಲಿಗೆ ಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಈ ಹಿಂದೆ ‘ಜನಸ್ಪಂದನ’ದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಜನರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಖಾತ್ರಿಪಡಿಸುವ ಉದ್ದೇಶದಿಂದ ‘ಪ್ರಜಾ ಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ರಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನಸಾಮಾನ್ಯರ ಮನೆಬಾಗಿಲಿಗೆ ಆಡಳಿತವನ್ನು ಕೊಂಡೊಯ್ದು, ಅವರ ನೋವು-ನಲಿವು ಹಾಗೂ ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನೊಳಗೆ ಸ್ಥಳದಲ್ಲಿಯೇ ಸೂಕ್ತ ಪರಿಹಾರ ಕಲ್ಪಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಪ್ರತಿ ಅರ್ಜಿಗೂ ಸ್ವೀಕೃತಿ ಸಂಖ್ಯೆ

‘ಪ್ರಜಾ ಸೇವೆ’ಯಡಿ ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅರ್ಜಿಗೂ ಸ್ವೀಕೃತಿ ಸಂಖ್ಯೆಯನ್ನು ನೀಡಲಾಗುವುದು. ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ.

ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತಾಲೂಕು ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವ ದಿನವನ್ನಾಗಿ ಆಚರಿಸಲಾಗುವುದು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನಸ್ನೇಹಿ ಆಡಳಿತಕ್ಕೆ ಮತ್ತಷ್ಟು ಒತ್ತು ನೀಡಲಾಗುತ್ತದೆ.

ರೈತರಿಗೆ ಬೆಳೆ ಪರಿಹಾರ

ಕಲಬುರಗಿ ಜಿಲ್ಲೆಯಲ್ಲಿ ಅನ್ನ, ಅಕ್ಷರ, ಆರೋಗ್ಯ ಮತ್ತು ಆವಿಷ್ಕಾರ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಳೆದ ವರ್ಷ ರಾಷ್ಟ್ರದಲ್ಲೇ ದಾಖಲೆ ಪ್ರಮಾಣದಲ್ಲಿ ₹653 ಕೋಟಿ ಬೆಳೆ ಪರಿಹಾರವನ್ನು ಜಿಲ್ಲೆಯ ರೈತರಿಗೆ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಈ ವರ್ಷವೂ ಸುಮಾರು 4.50 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದು, ಅರ್ಹ ರೈತರಿಗೆ ಪ್ರಾಮಾಣಿಕವಾಗಿ ಪರಿಹಾರ ಒದಗಿಸಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

ರೈತರ ಸಾಲಮನ್ನಾಕ್ಕೂ ಒತ್ತಾಯ

ಕೇಂದ್ರದ NDRF ಮಾರ್ಗಸೂಚಿಗಳಿಂದ ಬರಪೀಡಿತ ಪ್ರದೇಶಗಳನ್ನು ಘೋಷಿಸುವಲ್ಲಿ ಇರುವ ನಿರ್ಬಂಧಗಳನ್ನು ಸಡಿಲಿಸಬೇಕು ಎಂಬುದು ರಾಜ್ಯ ಸರ್ಕಾರದ ಬಹುದಿನಗಳ ಬೇಡಿಕೆಯಾಗಿದೆ. ಉದ್ಯಮಿಗಳಿಗೆ ನೀಡಲಾಗುತ್ತಿರುವ ಸಾಲಮನ್ನಾ ಸೌಲಭ್ಯವನ್ನು ರೈತರಿಗೂ ವಿಸ್ತರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.

ಜನರ ಬಳಿಗೆ ಸರ್ಕಾರ

ಸರ್ಕಾರ ಜನರ ಬಳಿಗೆ ಬರಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬುದೇ ‘ಪ್ರಜಾ ಸೇವೆ’ ಅಭಿಯಾನದ ಮೂಲ ಆಶಯ. ಪ್ರಜೆಗಳ ಕಣ್ಣೀರು ಒರೆಸಿ, ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸುವ ಮೂಲಕ ಜನಸ್ನೇಹಿ ಆಡಳಿತಕ್ಕೆ ಹೊಸ ದಿಕ್ಕು ನೀಡುವುದು ಸರ್ಕಾರದ ಉದ್ದೇಶವಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಪೋಸ್ಟ್

ಇದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ. ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಮನೆಬಾಗಿಲಿನಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ನಮ್ಮ ಸರ್ಕಾರ ‘ಪ್ರಜಾ ಸೇವೆ’ ಅಭಿಯಾನವನ್ನು ಆರಂಭಿಸಿದೆ.

ಕಲಬುರಗಿ ಜಿಲ್ಲೆಯ ಕಮಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ‘ಪ್ರಜಾ ಸೇವೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು, ಅವರ ಸೇವೆಯೇ ನಮ್ಮ ಮೊದಲ ಆದ್ಯತೆ. ನಿಮ್ಮ ಸೇವೆ ಮಾಡಲು ನಿಮ್ಮ ಬಾಗಿಲಿಗೆ ಬಂದಿದ್ದೇವೆ.

ಹಿಂದೆ ‘ಜನಸ್ಪಂದನ’ದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಜನರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಖಾತ್ರಿಪಡಿಸಲು ‘ಪ್ರಜಾ ಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ರಚಿಸಲಾಗಿದೆ.

ಜನಸಾಮಾನ್ಯರ ಮನೆಬಾಗಿಲಿಗೆ ಆಡಳಿತವನ್ನು ಕೊಂಡೊಯ್ದು, ಅವರ ದುಃಖ-ದುಮ್ಮಾನ, ನೋವು-ನಲಿವುಗಳಿಗೆ ಕಾನೂನಿನ ಚೌಕಟ್ಟಿನೊಳಗೆ ಸ್ಥಳದಲ್ಲಿಯೇ ಸೂಕ್ತ ಪರಿಹಾರ ಒದಗಿಸುವ ಜನಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನವನ್ನು ಕಾಂಗ್ರೆಸ್‌ ಸರ್ಕಾರ ಆರಂಭಿಸಿದೆ.

ಪ್ರತಿಯೊಂದು ಅರ್ಜಿಗೂ ಸ್ವೀಕೃತಿ ಸಂಖ್ಯೆ ನೀಡಿ, ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತಾಲೂಕು ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವ ಮಹತ್ವದ ದಿನವಾಗಿರಲಿದೆ. ಪ್ರಜೆಗಳ ಕಣ್ಣೀರು ಒರೆಸುವುದೇ ಪ್ರಜಾಪ್ರಭುತ್ವ ಸರ್ಕಾರದ ಮೂಲ ಆಶಯ.

ಕಲಬುರಗಿ ಜಿಲ್ಲೆಯಲ್ಲಿ ಅನ್ನ, ಅಕ್ಷರ, ಆರೋಗ್ಯ ಮತ್ತು ಆವಿಷ್ಕಾರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಳೆದ ವರ್ಷ ರಾಷ್ಟ್ರದಲ್ಲೇ ದಾಖಲೆ ಪ್ರಮಾಣದಲ್ಲಿ ₹653 ಕೋಟಿ ಬೆಳೆ ಪರಿಹಾರವನ್ನು ಜಿಲ್ಲೆಯ ರೈತರಿಗೆ ನೀಡಲಾಗಿದೆ. ಈ ವರ್ಷವೂ 4.50 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದು, ಪ್ರಾಮಾಣಿಕವಾಗಿ ಪರಿಹಾರ ಒದಗಿಸಲಾಗುವುದು.

ಕೇಂದ್ರದ NDRF ಮಾರ್ಗಸೂಚಿಗಳಿಂದ ಬರಪೀಡಿತ ಪ್ರದೇಶ ಘೋಷಣೆಗೆ ಇರುವ ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂಬುದು ನಮ್ಮ ಬಹುದಿನಗಳ ಬೇಡಿಕೆ. ಉದ್ಯಮಿಗಳಿಗೆ ನೀಡುವ ಸಾಲಮನ್ನಾ ಸೌಲಭ್ಯವನ್ನು ಕೇಂದ್ರ ಸರ್ಕಾರವು ರೈತರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular