BIG NEWS: ಪಿಎಸ್ ಐ ನೇಮಕಾತಿ ಹಗರಣದ ಆರೋಪಿಗಳ ಜೊತೆ ರಾಮನವಮಿಯೇ? ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಈಗ ಉತ್ತರ ಕೊಡಬೇಕು; ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಕಲಬುರ್ಗಿ: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನಿವಾಸಕ್ಕೆ ಬಿಜೆಪಿ ಸಂಸದ ಉಮೇಶ್ ಜಾಧವ್ ಭೇಟಿ ಹಾಗೂ ರಾಮನವಮಿ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಪಿಎಸ್ ಐ ಹಗರಣದ ಇನ್ನೋರ್ವ ಆರೋಪಿ ದಿವ್ಯಾ ಹಾಗರಗಿ ಜೊತೆ ಫೋಟೋಗೆ ಪೋಸ್ ನೀಡಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದು, ಪಿ ಎಸ್ ಐ ನೇಮಕಾತಿ ಅಕ್ರಮದಲ್ಲಿ ಬಿಜೆಪಿ ನಾಯಕರೇ ಶಾಮಿಲಾಗಿದ್ದಾರೆ ಎಂಬುದಕ್ಕೆ ಇದಕ್ಕಿಂತ ಯಾವ ಸಾಕ್ಷಿ ಬೇಕು? ಎಂದು ಪ್ರಶ್ನಿಸಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಪಿಎಸ್ ಐ ಹಗರಣದ ಪ್ರಮುಖ ಆರೋಪಿಗಳಾದ ಆರ್.ಡಿ.ಪಾಟೀಲ್ ಮನೆಗೆ ನಿನ್ನೆ ಭೇಟಿ ನೀಡಿ ಊಟೋಪಚಾರ ಮಾಡಿದ್ದಾರೆ. ಈ ಫೋಟೋ ಎಲ್ಲೆಡೆ ವೈರಲ್ ಆಗಿದೆ. ರಾಮನವಮಿ ಮೆರವಣಿಗೆ ವೇಳೆ ಆರೋಪಿ ದಿವ್ಯಾ ಹಾಗರಗಿ ಜೊತೆ ಇರುವ ಫೋಟೋ ಇಂದು ವೈರಲ್ ಆಗಿದೆ. ಅಂದರೆ ಪಿಎಸ್ ಐ ನೇಮಕಾತಿ ಹಗರಣಗಳ ಪ್ರಮುಖ ಆರೋಪಿಗಳು ಬಿಜೆಪಿ ಸಂಸದರಿಗೆ ಆಪ್ತರು. ಪಿಎಸ್ ಐ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಅಂದಿನ ಬಿಜೆಪಿ ಸರ್ಕಾರದ ಕೈವಾಡವಿದೆ ಎಂಬುದು ಸ್ಪಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಭ್ರಷ್ಟಾಚಾರ ತಡೆಯುತ್ತೇನೆ ಎನ್ನುತ್ತಾರೆ. ಯುವಕರ ಭವಿಷ್ಯವನ್ನೇ ಹಾಳು ಮಾಡಿದವರ ಬೆಂಬಲವನ್ನು ಬಿಜೆಪಿ ನಾಯಕರು ಕೇಳುತ್ತಿದ್ದಾರೆ. ಪಿಎಸ್ ಐ ಹಗರಣದಲ್ಲಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅಂದು ಬಂಧನವಾದಾಗ ಗೃಹ ಸಚಿವರಾಗಿದ್ದ ಅರಗ ಜ್ಞಾನೇಂದ್ರ ಅವರು ದಿವ್ಯಾ ಹಾಗರಗಿ ಬಿಜೆಪಿ ಕಾರ್ಯಕರ್ತೆಯಲ್ಲ, ಯಾರೆಂಬುದೇ ಗೊತ್ತಿಲ್ಲ ಎಂದಿದ್ದರು. ಈಗ ದಿವ್ಯಾ ಹಾಗರಗಿ ಬೇಲ್ ಮೇಲೆ ಹೊರ ಬಂದಿದ್ದಾರೆ. ರಾಮನವಮಿ ಮೆರವಣಿಗೆಯಲ್ಲಿ ಸಂಸದರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಪಿಎಸ್ ಐ ಹಗರಣದ ಆರೋಪಿಗಳ ಜೊತೆ ರಾಮನವಮಿ ಆಚರಣೆಯೇ? ಅರಗ ಜ್ಞಾನೇಂದ್ರ ಅವರೇ ಈಗ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read