HomeLatest NewsBIG NEWS: ಸಿಎಂ ಬದಲಾವಣೆ ಮಾಡಬೇಕೋ, ಬೇಡವೋ ಎಂಬುದು ಹೈಕಮಾಂಡ್ ನಿರ್ಧಾರ: ನಾವು-ನೀವು ಚರ್ಚಿಸುವುದರಲ್ಲಿ ಅರ್ಥವಿಲ್ಲ...

BIG NEWS: ಸಿಎಂ ಬದಲಾವಣೆ ಮಾಡಬೇಕೋ, ಬೇಡವೋ ಎಂಬುದು ಹೈಕಮಾಂಡ್ ನಿರ್ಧಾರ: ನಾವು-ನೀವು ಚರ್ಚಿಸುವುದರಲ್ಲಿ ಅರ್ಥವಿಲ್ಲ ಎಂದ ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಮಾಡಬೇಕೋ, ಬೇಡವೋ ಎಂಬುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು, ಈ ಬಗ್ಗೆ ಅವರೇ ಮಾತನಾಡುತ್ತಿಲ್ಲ. ಹೀಗಿರುವಾಗ ನಾವು-ನೀವು ಚರ್ಚೆ ಮಾಡಿದರೆ ಅರ್ಥವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿದ್ದು ಯಾರು? ನಾವ್ಯಾರು ಈ ಬಗ್ಗೆ ಹೇಳಿಕೆ ಕೊಟ್ಟಿಲ್ಲ ಎಂದರು. ಸಿಎಂ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವರಿಷ್ಠರು ಹೀಗೆ ಯಾರೊಂದಿಗೂ ಚರ್ಚೆಯಾಗಿಲ್ಲ. ಸಿಎಂ ಬದಲಿಸುವ ಅಧಿಕಾರ ಇರುವ ನಾಯಕರು ಸುಮ್ಮನಿದ್ದಾರೆ. ಹೀಗಾಗಿ ಈ ಕುರಿತು ಚರ್ಚಿಸುವುದು ಅಪ್ರಸ್ತುತ ಎಂದರು.

ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ನಡೆಸಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗುವಂತೆ ಶಾಸಕರಿಗೆ ಸೂಚಿಸಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧ್ಯಕ್ಷರ ಬದಲಾವಣೆ ಕುರಿತು ಸಹ ಯಾವ ಚರ್ಚೆಯಾಗಿಲ್ಲ. ಎಲ್ಲವನ್ನೂ ಹೈಕಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular