HomeKarnatakaಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್

ರಾಯಚೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ, ಫೋಟೋವನ್ನು ತಿರುಚಿ ಹಂಚಿಕೊಂಡ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿಂಧನೂರು ತಾಲೂಕಿನ ಹುಡಾ ಗ್ರಾಮದ ನಿವಾಸಿ ಪಂಪೇಶ್ ಪಂಡಿತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿ ಪಂಪೇಶ್, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಫೋಟೋಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಮುಖವನ್ನು ಎಡಿಟ್ ಮಾಡಿ ಅಳವಡಿಸಿ, ತಿರುಚಿದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಸಚಿವರ ವಿರುದ್ಧ ಅವಹೇಳನಕಾರಿ ಬರಹವನ್ನು ಪೋಸ್ಟ್ ಮಾಡಿರುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ ರಾಮಣ್ಣ ಗೋನವಾರ ಎಂಬುವರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ತನಿಖೆಯ ಭಾಗವಾಗಿ ಆರೋಪಿ ಪಂಪೇಶ್ ಪಂಡಿತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಕರ್ನಾಟಕ ಆಗ್ನೇಯ ಪದವೀಧರ ಚುನಾವಣೆ: ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯನ್ನು ಮಾದರಿ ನೀತಿ ಸಂಹಿತೆಯನ್ವಯ ಅತ್ಯಂತ ಪಾರದರ್ಶಕವಾಗಿ ನಡೆಸಬೇಕು. ನಿಯೋಜಿತ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಯು ಯಾವುದೇ ಗೊಂದಲ ಮತ್ತು ಲೋಪಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಯ ಪೂರ್ವಸಿದ್ದತಾ ಸಭೆ ಹಾಗೂ ವಿಡಿಯೋ ಸಂವಾದದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಟೋಬರ್‌ 23 ರಂದು ಬೆಳಿಗ್ಗೆ 8.00 ರಿಂದ ಸಂಜೆ 4.00 ರವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್‌ 20 ಮತ್ತು 21 ರಂದು ಸರ್ಕಾರಿ ರಜೆ ಇರುವುದರಿಂದ ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ ಹಾಜರಿರಬೇಕು ಎಂದು ಆದೇಶ ನೀಡಿದರು.

ಮತದಾರರ ಚೀಟಿ ಹಂಚುವ ಕಾರ್ಯವನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು. ವಿತರಿಸಲಾಗದೆ ಬಾಕಿ ಉಳಿಯುವ ಮತದಾರರ ಚೀಟಿಗಳನ್ನು ಚುನಾವಣೆಯ ದಿನದಂದೇ ಮತಗಟ್ಟೆ ಕೇಂದ್ರಗಳಲ್ಲಿ ವಿತರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ” ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೇಖರ್‌ ಹೆಚ್.ಟಿ. ಅವರು ಮಾತನಾಡಿ, “ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಯು ಶಾಂತಿಯುತವಾಗಿ ನಡೆಯಲು ಅಗತ್ಯವಿರುವಷ್ಟು ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕ್ಷೇತ್ರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಡಿವೈಎಸ್ಪಿ ಶರಣಬಸವೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ ಆದೇಶದಲ್ಲಿ ತಿದ್ದುಪಡಿ: ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2026ರ ಹಿನ್ನೆಲೆಯಲ್ಲಿ ಈ ಹಿಂದೆ ಹೊರಡಿಸಲಾಗಿದ್ದ ಮದ್ಯ ಮಾರಾಟ ನಿಷೇಧ (ಶುಷ್ಕ ದಿನ) ಆದೇಶಕ್ಕೆ ಸಂಬಂಧಿಸಿದಂತೆ ದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ತಾಲ್ಲೂಕು, ಹರಿಹರ ತಾಲ್ಲೂಕು (ಹರಿಹರ ನಗರ ವ್ಯಾಪ್ತಿಯ ಕೆ.ಎಸ್.ಬಿ.ಸಿ.ಎಲ್ ಹೊರತುಪಡಿಸಿ) ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ಟೋಬರ್‌ 21 ರಂದು ಸಂಜೆ 6 ಗಂಟೆಯಿಂದ ಅಕ್ಟೋಬರ್‌ 23 ರ ಸಂಜೆ 7 ಗಂಟೆಯವರಿಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿದೆ. ದಾವಣಗೆರೆ ನಗರ ವ್ಯಾಪ್ತಿಯ ಕೆ.ಎಸ್.ಬಿ.ಸಿ.ಎಲ್ (KSBCL) ಡಿಪೋ ಹೊರತುಪಡಿಸಿ ಆದೇಶ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಜಿ.ಎಂ. ಗಂಗಾಧರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಅಕ್ಟೋಬರ್ 23 ರಂದು ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾನವು 2026ರ ಅಕ್ಟೋಬರ್ 23 ರ ಶುಕ್ರವಾರ ನಡೆಯಲಿರುವುದರಿಂದ, ಅರ್ಹಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಶುಕ್ರವಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ

ಮತದಾರರು ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿಯನ್ನು ಪಡೆಯುವ ಷರತ್ತಿಗೊಳಪಟ್ಟು, ರಜೆ ಮಂಜೂರು ಮಾಡಲು ಅಧಿಕಾರವುಳ್ಳ ಪ್ರಾಧಿಕಾರಿಗಳು ಈ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕೆಂದು ಅದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular