HomeKarnatakaBIG NEWS: ವಿಧಾನಸೌಧವನ್ನು ವ್ಯಾಪಾರಸೌಧ ಮಾಡಿದ್ದೇ ಬಿಜೆಪಿಯವರು; ಮತ್ತೆ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ

BIG NEWS: ವಿಧಾನಸೌಧವನ್ನು ವ್ಯಾಪಾರಸೌಧ ಮಾಡಿದ್ದೇ ಬಿಜೆಪಿಯವರು; ಮತ್ತೆ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರೆದಿವೆ. ವಿಧಾನಸೌಧವನ್ನು ವ್ಯಾಪಾರಸೌಧವನ್ನಾಗಿ ಮಾಡಿದ್ದೇ ಬಿಜೆಪಿಯವರು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಮೊದಲು ಪ್ರವಚನ ಮಾಡುವುದನ್ನು ನಿಲ್ಲಿಸಲಿ. ವಿಧಾನಸೌಧವನ್ನು ವ್ಯಾಪಾರಸೌಧವನ್ನಾಗಿ ಮಾಡಿಕೊಂಡಿದ್ದವರು ಬಿಜೆಪಿಯವರು ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ಪರೀಕ್ಷಾ ಅಕ್ರಮಗಳನ್ನು ಸಮರ್ಥವಾಗಿ ತಡೆದಿದ್ದೇವೆ. ಬಿಜೆಪಿಯವರ ಬಲಗೈ ಬಂಟರೇ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಪಿಎಸ್ಐ ಪರೀಕ್ಷಾ ಅಕ್ರಮ ನಡೆದಾಗ ಬಿಜೆಪಿಯವರಿಗೆ ಅಧಿಕಾರವಿತ್ತು. ಆಗ ಯಾಕೆ ಯಾವುದನ್ನೂ ಪತ್ತೆಹಚ್ಚಿಲ್ಲ? ಎಂದು ಪ್ರಶ್ನಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular