HomeKarnatakaಧರ್ಮಸ್ಥಳ ಬುರುಡೆ ಕೇಸ್: ಪ್ರಕಾಶ್ ರಾಜ್ ವಿರುದ್ಧದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಧರ್ಮಸ್ಥಳ ಬುರುಡೆ ಕೇಸ್: ಪ್ರಕಾಶ್ ರಾಜ್ ವಿರುದ್ಧದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಬೆಂಗಳೂರು: ಧರ್ಮಸ್ಥಳ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ, ಮಾಸ್ಕ್​ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯೆ ನೀಡಿದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ. ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳಿದೆ ಗೊತ್ತಿಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ ನ್ಯಾಯಾಲಯದಲ್ಲಿದೆ. ವಿಶೇಷ ತನಿಖಾ ದಳ (ಎಸ್ಐಟಿ)ಗೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಸ್ಐಟಿ ಮುಖ್ಯಸ್ಥರು ಆ ಪ್ರಶ್ನೆಗಳಿಗೆ ನ್ಯಾಯಾಲಯಕ್ಕೆ ಉತ್ತರ ನೀಡುತ್ತಾರೆ. ಅದನ್ನು ನಾವು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. . ನ್ಯಾಯಾಲಯಕ್ಕೆ ಉತ್ತರ ನೀಡಿದ ಬಳಿಕ ಮಾಹಿತಿ ನೀಡಲಾಗುವುದು ಎಂದರು.

ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಮಾಹಿತಿ ಪ್ರಕಾರ 200 ಕೋಟಿ ರೂಪಾಯಿಗಳ ಆರೋಪದ ಕುರಿತು ಪ್ರಸ್ತಾಪವಾಗಿದೆ. ಇದು ಸಣ್ಣ ಮೊತ್ತವಲ್ಲ. ಆದರೆ ಅದು ಎಷ್ಟು ನಿಜವೋ ಎಷ್ಟು ಸುಳ್ಳೋ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಅದೇ ವ್ಯಕ್ತಿ (ಚಿನ್ನಯ್ಯ) ಹಿಂದಿನ ಮತ್ತು ಈಗಿನ ಈ ಎಲ್ಲ ಹೇಳಿಕೆಗಳನ್ನು ನೀಡಿರುವುದರಿಂದ, ಅವುಗಳಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದನ್ನು ಪರಿಶೀಲಿಸುವುದು ಮುಖ್ಯ. ಯಾವುದೇ ಹೆಸರು ಪ್ರಸ್ತಾಪವಾದ ತಕ್ಷಣವೇ ಎಲ್ಲರೂ ಕ್ರಿಮಿನಲ್‌ಗಳಲ್ಲ. ಎಸ್ಐಟಿ ಮುಖ್ಯಸ್ಥರು ಮೊದಲು ನ್ಯಾಯಾಲಯಕ್ಕೆ ಉತ್ತರ ನೀಡಬೇಕು. ಆ ಬಗ್ಗೆ ಮಾಧ್ಯಮದಲ್ಲಿ ಚರ್ಚಿಸುವುದು ಸರಿಯಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular