HomeLatest NewsBREAKING: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಬೈಕ್ ಸವಾರ: ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ...

BREAKING: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಬೈಕ್ ಸವಾರ: ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸದಾಶಿವನಗರದಲ್ಲಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿ ವ್ಯಕ್ತಿಯೊಬ್ಬರು ಒದ್ದಾಡುತ್ತಿದ್ದರು. ಅದೇ ಮಾರ್ಗದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿ ಗಾಯಾಳು ನರಳಾಡುತ್ತಿರುವುದನ್ನು ಕಂಡಿದ್ದಾರೆ. ತಕ್ಷಣ ಚಾಲಕನಿಗೆ ಕಾರು ನಿಲ್ಲಿಸಲು ಹೇಳಿದ್ದಾರೆ. ಸ್ಥಳಕ್ಕಾಗಮಿಸಿ ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಮ್ಮದೇ ಕಾರಿನಲ್ಲಿ ಗಾಯಾಳುವನ್ನು ಕರೆದೊಯ್ದು ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ಸೂಕ್ತ ಚಿಕಿತ್ಸೆ ಕೊಡುವಂತೆ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ಗಾಯಾಳುವನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ ಸಚಿವ ಪ್ರಿಯಾಂಕ್ ಖರ್ಗೆ ಮಾನವೀಯತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular