HomeKarnatakaBIG NEWS: ಆರ್.ಎಸ್.ಎಸ್ ನೋಂದಣಿ ಪ್ರಶ್ನಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ರಾಜ್ಯಸಭಾ ಸದಸ್ಯ ನಾರಾಯಣ...

BIG NEWS: ಆರ್.ಎಸ್.ಎಸ್ ನೋಂದಣಿ ಪ್ರಶ್ನಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಪತ್ರ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೋಂದಣಿಯ ಬಗ್ಗೆ ಪ್ರಶ್ನೆ ಮಾಡಿ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದ ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಕ್ರಮಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಸಂಘಟನೆಯ ಕಾನೂನುಬದ್ಧ ಸ್ಥಾನಮಾನ ಮತ್ತು ಪಾರದರ್ಶಕತೆಯ ಬಗ್ಗೆ ಕೇಳಿದ್ದ ಪ್ರಶ್ನೆಗಳಿಗೆ ತಿರುಗೇಟು ನೀಡಿದ್ದ ಮೋಹನ್ ಭಾಗವತ್​​, ಹಿಂದೂ ಧರ್ಮ ರಿಜಿಸ್ಟರ್ ಆಗಿದೆಯೇ? ಎಂದು ಪ್ರಶ್ನಿಸಿದ್ದರು. ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದೆ ಎಂದಿದ್ದರು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಕೂಡ ಬಹಿರಂಗ ಪತ್ರ ಬರೆಯುವ ಮೂಲಕ ಪ್ರಿಯಾಂಕ್​​ಗೆ ಟಾಂಗ್ ನೀಡಿದ್ದಾರೆ.

ಕೇವಲ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಆಧಾರದ ಮೇಲೆ ಒಂದು ಸಂಸ್ಥೆಯ ಅಸ್ತಿತ್ವವನ್ನೇ ಪ್ರಶ್ನಿಸುವುದು ಸೂಕ್ತವಲ್ಲ. ಕಾಂಗ್ರೆಸ್ ಪಕ್ಷವು ಏಕೆ ನಿರಂತರವಾಗಿ ಹಿಂದೂ ಸಂಘಟನೆಗಳನ್ನೇ ಗುರಿಯಾಗಿಸಿಕೊಂಡು ಪ್ರಶ್ನಿಸುತ್ತದೆ ಎಂಬ ಅನುಮಾನ ಮೂಡಿದೆ. ಕರ್ನಾಟಕದಲ್ಲಿ ನಡೆದ ಹುಬ್ಬಳ್ಳಿ ಪೊಲೀಸ್ ಠಾಣೆ ಹಿಂಸಾಚಾರ, ಬೆಂಗಳೂರಿನ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗಳು, ಹಿಂಸಾತ್ಮಕ ಗುಂಪುಗಳಿಂದ ಸಾರ್ವಜನಿಕ ಆಸ್ತಿ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ನಡೆದ ದಾಳಿಗಳು ರಾಜ್ಯದ ಜನತೆಯ ನೆನಪಿನಲ್ಲಿ ಇನ್ನೂ ಜೀವಂತವಾಗಿವೆ. ಹಿಂಸೆಗೆ ಒಳಗಾದವರಲ್ಲಿ OBC ಕಾಂಗ್ರೆಸ್ ಶಾಸಕರ ಮನೆಯೂ ಸೇರಿದೆ. ಇಂತಹ ಘಟನೆಗಳ ಕುರಿತು ಇದೇ ರೀತಿಯ ಬಹಿರಂಗ ಪತ್ರಗಳು, ಇದೇ ಮಟ್ಟದ ಆಕ್ರೋಶ ಮತ್ತು ಇದೇ ರೀತಿಯ ನೈತಿಕ ಪ್ರಶ್ನೆಗಳು ಏಕೆ ಉದ್ಭವಿಸಲಿಲ್ಲ ಎಂಬುದು ಜನರ ಪ್ರಶ್ನೆಯಾಗಿದೆ ಎಂದು ನಾರಾಯಣಸಾ ಭಾಂಡಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಬಗ್ಗೆ ನಿಮ್ಮ ಕಾಳಜಿ ನಿಜವಾಗಿಯೂ ಪ್ರಾಮಾಣಿಕವಾಗಿದ್ದರೆ ಅದೇ ಮಾನದಂಡವನ್ನು ಧಾರ್ಮಿಕ, ಸಾಮಾಜಿಕ, ರಾಜಕೀಯ, ಸೈದ್ಧಾಂತಿಕ ಹಿನ್ನೆಲೆಯ ಎಲ್ಲ ಸಂಘಟನೆಗಳಿಗೂ ಅನ್ವಯಿಸಬೇಕು. ರಾಜಕೀಯ ಪ್ರತೀಕಾರದ ಭಾವನೆಯಿಂದ ಒಂದು ನಿರ್ದಿಷ್ಟ ಸಂಘಟನೆಯನ್ನು ಮಾತ್ರ ಗುರಿಯಾಗಿಸಿ ಸಾರ್ವಜನಿಕವಾಗಿ ಅನುಮಾನ ವ್ಯಕ್ತಪಡಿಸುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ಅನುಗುಣವಾಗುವುದಿಲ್ಲ. ಕಾಂಗ್ರೆಸ್​​ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಮಯ ಬಂದಿದೆ. ಹಿಂದೂ ಸಂಘಟನೆಗಳನ್ನು ಗುರಿಯಾಗಿಸುವುದು ಮತ್ತು ಬಹುಸಂಖ್ಯಾತ ಸಮಾಜದ ಭಾವನೆಗಳನ್ನು ಪದೇಪದೇ ನೋಯಿಸುವ ರಾಜಕೀಯ ತಂತ್ರವು ಸಮಾಜದಲ್ಲಿ ವಿಭಜನೆಗೆ ಕಾರಣವಾಗಬಹುದು. ಭಾರತದ ಸಂವಿಧಾನವು ಓಲೈಕೆ ರಾಜಕಾರಣವನ್ನೂ ಬಯಸುವುದಿಲ್ಲ . ಪೂರ್ವಾಗ್ರಹವನ್ನೂ ಒಪ್ಪುವುದಿಲ್ಲ. ರಾಷ್ಟ್ರ ನಿರ್ಮಾಣಕ್ಕೆ ಸೇವೆ ಸಲ್ಲಿಸಿದ ಸಂಸ್ಥೆಗಳ ಕೊಡುಗೆಯನ್ನು ಗೌರವಿಸುತ್ತಾ, ಯಾವುದೇ ರೀತಿಯ ಅತಿರೇಕ, ಹಿಂಸಾಚಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಪಕ್ಷಪಾತವಿಲ್ಲದೆ ಕ್ರಮ ಕೈಗೊಳ್ಳುವುದೇ ನಿಜವಾದ ಸಂವಿಧಾನಾತ್ಮಕ ಕರ್ತವ್ಯ ಎಂದವರು ತಿಳಿಸಿದ್ದಾರೆ.

ನಾರಾಯಣ ಭಾಂಡಗೆ ಬರೆದ ಪತ್ರದಲ್ಲೇನಿದೆ?:

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತುಮೋಹನ್ ಭಾಗವತ್ ಜೀ ಅವರಿಗೆ ನೀವು ಬರೆದ ಪತ್ರಕ್ಕೆ ಆರ್.ಎಸ್.ಎಸ್ ನ ಸ್ವಯಂಸೇವಕ ಆದ ನನ್ನ ಉತ್ತರ.

ಮಾನ್ಯರೇ,
ಘದ ಸರ್ಸಂಘಚಾಲಕರಾದ ಮೋಹನ್ ಭಾಗವತ್ ಜೀ ಅವರಿಗೆ ನೀವು ಬರೆದಿರುವ ಪತ್ರವನ್ನು ನಾನು ಗಮನದಿಂದ ಓದಿದ್ದೇನೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸಂಸ್ಥೆಯನ್ನು ಕಾನೂನಿನ ಚೌಕಟ್ಟಿನೊಳಗೆ ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಆ ಪ್ರಶ್ನೆಗಳು ಸತ್ಯಾಂಶಗಳು, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಎಲ್ಲರಿಗೂ ಸಮಾನವಾದ ಮಾನದಂಡಗಳ ಆಧಾರದ ಮೇಲೆ ಇರಬೇಕು; ರಾಜಕೀಯ ಪೂರ್ವಾಗ್ರಹ ಮತ್ತು ಆಯ್ದ ಗುರಿತಟ್ಟುವಿಕೆಯ ಆಧಾರದ ಮೇಲೆ ಅಲ್ಲ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ತನ್ನ ಶತಮಾನೋತ್ಸವದ ಪಯಣವನ್ನು ಪೂರ್ಣಗೊಳಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಸಂಕಷ್ಟದ ಸಮಯಗಳಲ್ಲಿ ಅದರ ಸೇವಾ ಮನೋಭಾವವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ಪ್ರವಾಹ, ಭೂಕಂಪ, ಚಂಡಮಾರುತ, ಸಾಂಕ್ರಾಮಿಕ ರೋಗಗಳಂತಹ ಅನೇಕ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರು ಜೀವದ ಹಂಗು ತೊರೆದು ರಕ್ಷಣಾ ಕಾರ್ಯ, ಆಹಾರ ವಿತರಣೆ, ವೈದ್ಯಕೀಯ ನೆರವು ಹಾಗೂ ಪುನರ್ವಸತಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಜಾತಿ, ಧರ್ಮ, ಭಾಷೆ ಎಂಬ ಭೇದವಿಲ್ಲದೆ ಮಾನವೀಯ ಸೇವೆ ಸಲ್ಲಿಸಿರುವ ಈ ಸೇವಾ ಪರಂಪರೆಯನ್ನು ದೇಶವೇ ಸಾಕ್ಷಿಯಾಗಿದೆ.

ಚೀನಾ ದಾಳಿಯ ನಂತರದ ರಾಷ್ಟ್ರೀಯ ಸಂಕಷ್ಟದ ಸಂದರ್ಭದಲ್ಲಿ ದೇಶಸೇವೆಗೆ ತೋರಿದ ಶಿಸ್ತು ಮತ್ತು ದೇಶಭಕ್ತಿಯನ್ನು ಗೌರವಿಸಿ, ಭಾರತದ ಮೊದಲ ಪ್ರಧಾನಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು ಅವರು 1963ರ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರಿಗೆ ಭಾಗವಹಿಸುವ ಅವಕಾಶ ನೀಡಿದ್ದರು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ರಾಷ್ಟ್ರಹಿತಕ್ಕಾಗಿ ಕಾರ್ಯನಿರ್ವಹಿಸಿದವರನ್ನು ಗೌರವಿಸುವುದು ಭಾರತದ ಪ್ರಜಾಪ್ರಭುತ್ವದ ಶ್ರೇಷ್ಠ ಪರಂಪರೆಯಾಗಿತ್ತು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಸೇರಿದಂತೆ ಹಲವು ಗಣ್ಯರು ಸಮಾಜದಲ್ಲಿ ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಸಾಮಾಜಿಕ ಸಮಾನತೆಯ ಅಗತ್ಯವನ್ನು ಒತ್ತಿ ಹೇಳಿದ್ದರು. ಆರ್‌ಎಸ್‌ಎಸ್ ತನ್ನ ಕಾರ್ಯಪದ್ಧತಿಯ ಮೂಲಕ ಸಮಾಜದ ಎಲ್ಲ ವರ್ಗಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಪ್ರಯತ್ನ ನಡೆಸಿದೆ ಎಂಬುದನ್ನು ಅದರ ಬೆಂಬಲಿಗರು ಉಲ್ಲೇಖಿಸುತ್ತಾರೆ. ಅನೇಕ ಮಾಜಿ ರಾಷ್ಟ್ರಪತಿಗಳು ಹಾಗೂ ಗಣ್ಯ ಸಾರ್ವಜನಿಕ ವ್ಯಕ್ತಿಗಳು ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅದರ ಶಿಸ್ತು, ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರಭಕ್ತಿಯ ಮೌಲ್ಯಗಳನ್ನು ಮೆಚ್ಚಿದ್ದಾರೆ.

ಇತಿಹಾಸದ ದಾಖಲೆಯ ಪ್ರಕಾರ, ಆರ್‌ಎಸ್‌ಎಸ್ ಮೇಲೆ ವಿವಿಧ ಸಂದರ್ಭಗಳಲ್ಲಿ ನಿಷೇಧ ಹೇರಲಾಗಿತ್ತು. ಆದರೆ ನಂತರ ನ್ಯಾಯಾಂಗ ಮತ್ತು ಕಾನೂನು ಪ್ರಕ್ರಿಯೆಗಳ ಪರಿಶೀಲನೆಯ ಬಳಿಕ ಆ ಕ್ರಮಗಳು ಮುಂದುವರಿಯಲಿಲ್ಲ ಮತ್ತು ಸಂಘವು ತನ್ನ ಚಟುವಟಿಕೆಗಳನ್ನು ಸಂವಿಧಾನಬದ್ಧ ಹಕ್ಕುಗಳ ಅಡಿಯಲ್ಲಿ ಮುಂದುವರಿಸಿತು. ಆದ್ದರಿಂದ ಕೇವಲ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಆಧಾರದ ಮೇಲೆ ಒಂದು ಸಂಸ್ಥೆಯ ಅಸ್ತಿತ್ವವನ್ನೇ ಪ್ರಶ್ನಿಸುವುದು ಸೂಕ್ತವಲ್ಲ.

ನಿಮ್ಮ ಪತ್ರದಿಂದ ಜನಸಾಮಾನ್ಯರಲ್ಲಿ ಮತ್ತೊಂದು ಪ್ರಶ್ನೆ ಉದ್ಭವಿಸಿದೆ. ಕಾಂಗ್ರೆಸ್ ಪಕ್ಷವು ಏಕೆ ನಿರಂತರವಾಗಿ ಹಿಂದೂ ಸಂಘಟನೆಗಳನ್ನೇ ಗುರಿಯಾಗಿಸಿಕೊಂಡು ಪ್ರಶ್ನಿಸುತ್ತದೆ ಎಂಬ ಅನುಮಾನ ಮೂಡಿದೆ. ಕರ್ನಾಟಕದಲ್ಲಿ ನಡೆದ ಹುಬ್ಬಳ್ಳಿ ಪೊಲೀಸ್ ಠಾಣೆ ಹಿಂಸಾಚಾರ, ಕೆ.ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಗಳು, ಹಿಂಸಾತ್ಮಕ ಗುಂಪುಗಳಿಂದ ಸಾರ್ವಜನಿಕ ಆಸ್ತಿ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ನಡೆದ ದಾಳಿಗಳು ರಾಜ್ಯದ ಜನತೆಯ ನೆನಪಿನಲ್ಲಿ ಇನ್ನೂ ಜೀವಂತವಾಗಿವೆ. ಹಿಂಸೆಗೆ ಒಳಗಾದವರಲ್ಲಿ ಹಿಂದುಳಿದ ವರ್ಗದ ಕಾಂಗ್ರೆಸ್ ಶಾಸಕರ ಮನೆ ಮೇಲಿನ ದಾಳಿಯೂ ಸೇರಿದೆ. ಇಂತಹ ಘಟನೆಗಳ ಕುರಿತು ಇದೇ ರೀತಿಯ ಬಹಿರಂಗ ಪತ್ರಗಳು, ಇದೇ ಮಟ್ಟದ ಆಕ್ರೋಶ ಮತ್ತು ಇದೇ ರೀತಿಯ ನೈತಿಕ ಪ್ರಶ್ನೆಗಳು ಏಕೆ ಉದ್ಭವಿಸಲಿಲ್ಲ ಎಂಬುದು ಜನರ ಪ್ರಶ್ನೆಯಾಗಿದೆ.

ದೇಶದ ವಿವಿಧ ಭಾಗಗಳಲ್ಲಿ ರಾಜಕೀಯ ಹಾಗೂ ಸೈದ್ಧಾಂತಿಕ ಹಿಂಸಾಚಾರಕ್ಕೆ ಬಲಿಯಾದ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಕುಟುಂಬಗಳ ನೋವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಯಾವುದೇ ಹತ್ಯೆ, ಯಾವುದೇ ಹಿಂಸಾಚಾರ ಮತ್ತು ಯಾವುದೇ ರೀತಿಯ ಅತಿರೇಕವನ್ನು ಕಠಿಣವಾಗಿ ಖಂಡಿಸಬೇಕು. ನ್ಯಾಯವು ಎಲ್ಲರಿಗೂ ಸಮಾನವಾಗಿರಬೇಕು; ಬಲಿಯಾದವರ ರಾಜಕೀಯ ಗುರುತು ಅಥವಾ ಸೈದ್ಧಾಂತಿಕ ನಿಲುವಿನ ಆಧಾರದ ಮೇಲೆ ಬದಲಾಗಬಾರದು.

ನಿಜವಾದ ಧರ್ಮನಿರಪೇಕ್ಷತೆ ಎಂದರೆ ಹಿಂದೂ ಸಂಸ್ಥೆಗಳ ಬಗ್ಗೆ ಅನುಮಾನ ಮತ್ತು ಇತರರ ಬಗ್ಗೆ ಮೌನ ಅಲ್ಲ. ಅದು ಕಾನೂನಿನ ಮುಂದೆ ಎಲ್ಲರಿಗೂ ಸಮಾನ ಮಾನದಂಡವನ್ನು ಅನ್ವಯಿಸುವುದಾಗಿದೆ. ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಬಗ್ಗೆ ನಿಮ್ಮ ಕಾಳಜಿ ನಿಜವಾಗಿಯೂ ಪ್ರಾಮಾಣಿಕವಾಗಿದ್ದರೆ, ಅದೇ ಮಾನದಂಡವನ್ನು ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ಸೈದ್ಧಾಂತಿಕ ಹಿನ್ನೆಲೆಯ ಎಲ್ಲ ಸಂಘಟನೆಗಳಿಗೂ ಅನ್ವಯಿಸಬೇಕು.

ದೇಶದ ಸಂವಿಧಾನವು ಯಾವುದೇ ಸಂಘಟನೆ ಕಾನೂನು ಉಲ್ಲಂಘಿಸಿದರೆ ತನಿಖೆ ನಡೆಸಲು ಮತ್ತು ಕ್ರಮ ಕೈಗೊಳ್ಳಲು ಸಮರ್ಪಕ ವ್ಯವಸ್ಥೆಗಳನ್ನು ಒದಗಿಸಿದೆ. ಆದರೆ ರಾಜಕೀಯ ಪ್ರತೀಕಾರದ ಭಾವನೆಯಿಂದ ಒಂದು ನಿರ್ದಿಷ್ಟ ಸಂಘಟನೆಯನ್ನು ಮಾತ್ರ ಗುರಿಯಾಗಿಸಿ ಸಾರ್ವಜನಿಕವಾಗಿ ಅನುಮಾನ ವ್ಯಕ್ತಪಡಿಸುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ಅನುಗುಣವಾಗುವುದಿಲ್ಲ.

ಕಾಂಗ್ರೆಸ್ ಪಕ್ಷವು ತನ್ನ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಮಯ ಬಂದಿದೆ. ಹಿಂದೂ ಸಂಘಟನೆಗಳನ್ನು ಗುರಿಯಾಗಿಸುವುದು ಮತ್ತು ಬಹುಸಂಖ್ಯಾತ ಸಮಾಜದ ಭಾವನೆಗಳನ್ನು ಪದೇಪದೇ ನೋಯಿಸುವ ರಾಜಕೀಯ ತಂತ್ರವು ಸಮಾಜದಲ್ಲಿ ವಿಭಜನೆಗೆ ಕಾರಣವಾಗಬಹುದು ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular