HomeKarnatakaಬೆಳಗಾವಿಯಲ್ಲಿ RSS ವಾರ್ಷಿಕ ಸಭೆ : ಬೀದಿಗಿಳಿದು ಪರೇಡ್​ ಮಾಡಲು ಅವಕಾಶ ಇಲ್ಲ: ಗೃಹ ಸಚಿವ...

ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ : ಬೀದಿಗಿಳಿದು ಪರೇಡ್​ ಮಾಡಲು ಅವಕಾಶ ಇಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಳಗಾವಿ: ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ಬೆಳಗಾವಿಯಲ್ಲಿ ಆರ್.​​ಎಸ್.​​ಎಸ್ ಪ್ರಚಾರಕರ ವಾರ್ಷಿಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಜನಗಣತಿ ಪ್ರಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಈ ಸಭೆಯಲ್ಲಿ ದೇಶದಾದ್ಯಂತ ಇರುವ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಭಾಗವಹಿಸಲಿದ್ದಾರೆ. ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಆರ್.ಎಸ್.ಎಸ್ ನವರು ಕಾರ್ಯಕ್ರಮ ಬೇಕಿದ್ದರೆ ನಡೆಸಿಕೊಳ್ಳಲಿ. ಆದರೆ, ಬೀದಿಗಿಳಿದು ಪರೇಡ್​ಗೆ ಅವಕಾಶ ಇಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಗೃಹ ಸಚಿವನಾಗಿ ಇರುವ ತನಕ ಆರ್​​.ಎಸ್.​​ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ಚರ್ಚೆಯಾಗುತ್ತಿದ್ದು, ಇದರ ಮಧ್ಯೆ ಇದೀಗ ಬೆಳಗಾವಿ ಕಾರ್ಯಕ್ರಮ ಆರಂಭವಾಗುವುದಕ್ಕೂ ಮೊದಲೇ ಮತ್ತೊಮ್ಮೆ ಪರೇಡ್ ಗೆ ಅವಕಾಶವಿಲ್ಲ ಎಂದು ಪುನರುಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular