ದಾವಣಗೆರೆ, ಗದಗದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ದಾವಣಗೆರೆ, ಗದಗದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ.

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಇಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ.

ಗದಗ ನಗರದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ಹಾವೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ ಸ್ವಾಮಿ ಗಡ್ಡದೇವರ ಮಠ ಪರವಾಗಿ ಪ್ರಿಯಾಂಕ ಗಾಂಧಿ ಪ್ರಚಾರ ನಡೆಸಿ ಮತ ಯಾಚಿಸಲಿದ್ದಾರೆ. ಗದಗದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read