HomeKarnatakaವಿದ್ಯಾರ್ಥಿಗಳಿಗೆ ಸೂಪರ್ ಸುದ್ದಿ : 35 ಸಾವಿರದವರೆಗೆ 'PRIZE MONEY' ಪಡೆಯಿರಿ

ವಿದ್ಯಾರ್ಥಿಗಳಿಗೆ ಸೂಪರ್ ಸುದ್ದಿ : 35 ಸಾವಿರದವರೆಗೆ ‘PRIZE MONEY’ ಪಡೆಯಿರಿ

ಶಿವಮೊಗ್ಗ :  2023-24 ಸಾಲಿಗೆ ಸಾಗರ ಸಮಾಜ ಕಲ್ಯಾಣ ಇಲಾಖೆಯು ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯು.ಸಿ ಮತ್ತು 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸ್‍ಗಳಿಗೆ ರೂ.20,000/-, ಪದವಿ ರೂ.25,000/- , ಸ್ನಾತಕೋತ್ತರ ಪದವಿ ಪದವಿ ರೂ.30,000/- ಹಾಗೂ ಕೃಷಿ/ ಇಂಜಿನಿಯರಿಂಗ್/ ವೈದ್ಯಕೀಯ/ ಪಶುವೈದ್ಯಕೀಯ ರೂ.35,000/- ಗಳನ್ನು ಪಡೆಯಲು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.tw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿಯನ್ನು ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08183-229402/9480843192 ಗಳನ್ನು ಸಂಪರ್ಕಿಸುವಂತೆ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :  2023-24 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿನಿಲಯಗಳಲ್ಲಿ ಮೆಟ್ರಿಕ್ ನಂತರದ ಹಾಗೂ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಸಕ್ತ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.xn--in-rwhia2fue/ ಜು.15 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08183-222129/ 8050770005 ಅಥವಾ https://bcwd.karnataka.gov.in, email- [email protected] ಗಳನ್ನು ಸಂಪರ್ಕಿಸುವುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular