ಕೋತಿ ಸೋಮನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಮೈಸೂರು: ಪೆರೋಲ್ ಮೇಲೆ ಹೊರ ಬಂದಿದ್ದ ಕೈದಿ ತಲೆಮರಿಸಿಕೊಂಡ ಹಿನ್ನೆಲೆಯಲ್ಲಿ ಅಪರಾಧಿ ಪತ್ತೆಗೆ ಕಮಿಷನರ್ 50,000 ರೂ. ನಗದು ಬಹುಮಾನ ಘೋಷಿಸಿದ್ದಾರೆ.

ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಬಹುಮಾನ ಘೋಷಿಸಿದ್ದಾರೆ. ಸೋಮ ಅಲಿಯಾಸ್ ಕೋತಿ ಸೋಮ ಪರಾರಿಯಾಗಿರುವ ಅಪರಾಧಿಯಾಗಿದ್ದಾನೆ. ಕೊಲೆ ಪ್ರಕರಣದಲ್ಲಿ ಮಂಡ್ಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮೈಸೂರು ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಯಾಗಿದ್ದ ಸೋಮ 30 ದಿನಗಳ ಪೆರೋಲ್ ರಜೆ ಮೇಲೆ ಜೈಲಿನಿಂದ ಹೊರಬಂದಿದ್ದು, ತಲೆಮರೆಸಿಕೊಂಡಿದ್ದಾನೆ.

ಕಾರಾಗೃಹಕ್ಕೆ ಶರಣಾಗದೆ ಸೋಮ ತಲೆಮರೆಸಿಕೊಂಡಿದ್ದಾನೆ. ಮೈಸೂರು ನಗರದ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪರಾಧಿ ಸೋಮನ ಪತ್ತೆಗೆ ಸುಳಿವು ನೀಡಿದವರಿಗೆ ಪೊಲೀಸ್ ಕಮಿಷನರ್ 50 ಸಾವಿರ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read