ಪ್ರೊ ಕಬಡ್ಡಿ ಲೀಗ್ ನಲ್ಲಿ ಈಗಾಗಲೇ ಸುಮಾರು 70 ಪಂದ್ಯಗಳು ನಡೆದಿದ್ದು, ಬೆಂಗಾಲ್ ವಾರಿಯರ್ಸ್, ಗುಜರಾತ್ ಜೈಂಟ್ಸ್ ಹಾಗೂ ಬೆಂಗಳೂರು ಬುಲ್ಸ್ ತಂಡ ಸೋಲಿನ ಸರಪಳಿಯಲ್ಲಿ ಸಿಲುಕಿಕೊಂಡಿದೆ, ಈ ಮೂರು ತಂಡಕ್ಕೂ ಮುಂಬರುವ ಎಲ್ಲಾ ಪಂದ್ಯಗಳಲ್ಲಿ ಜಯ ಅನಿವಾರ್ಯವಾಗಿದ್ದು, ಕಮ್ ಬ್ಯಾಕ್ ಮಾಡಲು ನೋಡುತ್ತಿವೆ.
ಇಂದು ಪ್ರೊ ಕಬಡ್ಡಿಯ ಮೊದಲನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ತೆಲುಗು ಟೈಟನ್ಸ್ ಮುಖಾಮುಖಿಯಾಗುತ್ತಿದ್ದು, ಕಬಡ್ಡಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಗಾಯದ ಸಮಸ್ಯೆಯಿಂದ ಕೆಲವು ಪಂದ್ಯಗಳಿಂದ ದೂರ ಉಳಿದಿದ್ದ, ತೆಲುಗು ಟೈಟನ್ಸ್ ನ ಸ್ಟಾರ್ ಆಟಗಾರ ಪವನ್ ಸೆಹ್ರಾವತ್ ಇಂದು ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಾಗಿದೆ. ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನದಿಂದ ಅತಿ ವೇಗವಾಗಿ ಸೆಮಿ ಫೈನಲ್ ಸ್ಥಾನ ಕಳೆದುಕೊಂಡಿದ್ದ, ತೆಲುಗು ಟೈಟನ್ಸ್ ಈ ಬಾರಿ ಸತತ ಪಂದ್ಯವನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ರಾರಾಜಿಸುತ್ತಿದೆ. ಗುಜರಾತ್ ಜೈಂಟ್ಸ್ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ತನ್ನ ಸೆಮಿ ಫೈನಲ್ ಕನಸನ್ನು ಜೀವಂತವಾಗಿಸಿಕೊಳ್ಳುವ ನೀರಿಕ್ಷೆಯಲ್ಲಿದೆ. ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಹಾಗೂ ಹರಿಯಾಣ ಸ್ಟೀಲರ್ಸ್ ಮುಖಮುಖಿಯಾಗಲಿವೆ.
