BREAKING : ಪಾಕ್ ಪರ ಘೋಷಣೆ ಕೂಗಿದ ಪ್ರಕರಣ : ಆರೋಪಿ ನಾಶಿಪುಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾಶಿಪುಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ನಾಶಿಪುಡಿ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಪ್ರಕರಣ ಸಂಬಂಧ ಆರೋಪಿಯನ್ನು ಬೆಂಗಳೂರಿನ 39 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ನಾಶಿಪುಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ಆರೋಪ ಪ್ರತ್ಯಾರೋಪಗಳ ನಡುವೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಎಫ್.ಎಸ್.ಎಲ್. ವರದಿ ಆಧರಿಸಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳನ್ನು ಬಂಧಿಸುವಂತೆ ಭಾರಿ ಆಗ್ರಹ ವ್ಯಕ್ತವಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read